ಮಂಗಳೂರು : ನಗರದ ಕೋಡಿಕಲ್ ನ ನಾಗಬ್ರಹ್ಮ ದೇವಸ್ಥಾನದ ನಾಗನ ಕಲ್ಲನ್ನು ದುಷ್ಕರ್ಮಿಗಳು ಹೊರಗಡೆ ಎಸೆದು ಧ್ವಂಸ ಮಾಡಿದ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗು ಸ್ಥಳೀಯರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಸುದ್ದಿ ತಿಳಿದ ಶಾಸಕ ಡಾ.ಭರತ್ ಶೆಟ್ಟಿ ವೈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ತಂಡ ರಚಿಸಿ ಪ್ರಕರಣ ಭೇದಿಸುವಂತೆ ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇದು ಮೂರನೇ ಪ್ರಕರಣವಾಗಿದ್ದು ಇದನ್ನು ತಡೆಯಬೇಕಿದೆ ಎಂದು ಹೇಳಿದರು.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗು ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪುವೆಲ್ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Click this button or press Ctrl+G to toggle between Kannada and English