ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿಗೆ ಚುನಾಯಿತರಾದ ಅವಧಿಯು 2022ರ ಜನವರಿ 5ರಂದು ಮುಕ್ತಾಯಗೊಳ್ಳುವ ಕಾರಣ ಈ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ವಿವರ ಇಂತಿದೆ:
2021ರ ನ.16ರ ಮಂಗಳವಾರ ಅಧಿಸೂಚನೆ ಹೊರಡಿಸುವ ದಿನವಾಗಿದೆ. ನ.23ರ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ. 26ರ ಶುಕ್ರವಾರ ನಾಮಪತ್ರ ಹಿಂತೆಗೆದುಕೊಳ್ಳಬಹುದಾಗಿದೆ. ಡಿಸೆಂಬರ್ 10ರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14 ರಂದು ಮತಗಳ ಎಣಿಕೆ ನಡೆಯಲಿದೆ ಹಾಗೂ ಡಿಸೆಂಬರ್ 16ರ ಗುರುವಾರ ಚುನಾವಣಾ ಪ್ರಕ್ರಿಯೆಯ ಕೊನೆಯ ದಿನವಾಗಿದೆ.
ಉಮೇದುವಾರರು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಚುನಾವಣಾಧಿಕಾರಿಗಳಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿಯವರಿಗೆ ಯಾವುದೇ ದಿನದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನವೆಂಬರ್ 23 ರೊಳಗೆ (ಸರಕಾರಿ ರಜಾ ದಿನದ ಹೊರತು) ಸಲ್ಲಿಸಬೇಕು.
ನಾಮಪತ್ರಗಳನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನವಂಬರ್ 24ರ ಬೆಳಗ್ಗೆ 11 ಗಂಟೆಗೆ ಪರಿಶೀಲಿಸಲಾಗುವುದು. ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ 2021ರ ಡಿಸೆಂಬರ್ 10ರ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂಟ್ರೋಲ್ ರೂಂ ಆರಂಭ
ಕರ್ನಾಟಕ ವಿಧಾನ ಪರಿಷತ್ತು – ಸ್ಥಳೀಯ ಪ್ರಾಧಿಕಾರ ಕ್ಷೇತ್ರಗಳಿಂದ ಆಯ್ಕೆಯಾಗುವ ಸದಸ್ಯರುಗಳ ದ್ವೈವಾರ್ಷಿಕ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ, ಬಿಯರ್, ತಯಾರಿಕೆ, ದಾಸ್ತಾನು, ಸಾಗಾಣಿಕೆ ಬಗ್ಗೆ ಸಾರ್ವಜನಿಕರು ನೀಡುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನÀಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಸಹಕಾರಿಯಾಗುವಂತೆ ಅಬಕಾರಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಹಾಗೂ ತಾಲೂಕು ಮಟ್ಟದ ಕಂಟ್ರೋಲ್ ರೂಮ್‍ಗಳನ್ನು ತೆರೆಯಲಾಗಿದೆ.
ಈ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಕಂಟ್ರೋಲ್ ರೂಂಗಳ ದೂ.ಸಂಖ್ಯೆಗೆ ಮಾಹಿತಿಯನ್ನು ನೀಡಬಹುದು.
ಕಂಟ್ರೋಲ್ ರೂಂ ದೂ.ಸಂ: ಗಳ ವಿವರ ಇಂತಿವೆ:
ಮಂಗಳೂರು ತಾಲೂಕು ವ್ಯಾಪ್ತಿಯ ಕಂಟ್ರೋಲ್ ರೂಂ. ನಗರದ ಮೇರಿಹಿಲ್‍ನ ಅಬಕಾರಿ ಭವನದ ಅಬಕಾರಿ ಉಪ ಆಯುಕ್ತರ ಕಚೇರಿ ದೂ.ಸಂ: 0824-2213872, ಬಂಟ್ವಾಳ ತಾಲೂಕು ವ್ಯಾಪ್ತಿಯ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08255-232726, ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08256-298757, ಪುತ್ತೂರು ತಾಲೂಕು ವ್ಯಾಪ್ತಿಯ ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08251-298481, ಸುಳ್ಯ ತಾಲೂಕು ವ್ಯಾಪ್ತಿಯ ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08247-231309, ಕೇಂದ್ರ ಕಚೇರಿ ಟೋಲ್ ಫ್ರೀ ಸಂ: 18004252550, ಜಿಲ್ಲಾ ಕಚೇರಿ ಟೋಲ್ ಫ್ರೀ ಸಂ: 18004253872 ಸಂಪರ್ಕಿಸಬಹುದು ಎಂದು ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English