ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಎಂ.ಆರ್. ವಾಸುದೇವ ಸ್ಪರ್ಧೆ

5:54 PM, Wednesday, November 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

MR Vasudeva ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ನಾನು ಚುನಾಯಿತನಾದರೆ ದಕ್ಷಿಣ ಕನ್ನಡ ಜಿಲ್ಲೆಗೆ ಕನ್ನಡ ಭವನ ನಿರ್ಮಾಣಕ್ಕೆ ಪ್ರಯತ್ನ ಪಡುವುದಾಗಿ ಹೇಳಿದರು.

ಕನ್ನಡ ಶಾಲೆಗಳು ಮುಚ್ಚದಂತೆ ಸರಕಾರವನ್ನು ಹಾಗೂ ಸಾರ್ವಜನಿಕರನ್ನು ರಾಜ್ಯ ಮಟ್ಟದ ಅಧ್ಯಕ್ಷರೊಂದಿಗೆ ಸೇರಿ ಪ್ರೇರೇಪಿಸುತ್ತೇನೆ. ನಾನು ಮಂಗಳೂರು ವಿಮಾನ ನಿಲ್ದಾಣದಲ್ಲಿ 15 ವರ್ಷಕ್ಕೂ ಹೆಚ್ಚಿನ ಕಾಲ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದೇನೆ. 14 ವರ್ಷಕ್ಕೂ ಮಿಕ್ಕಿ ತಡೆಯಲ್ಪಟ್ಟಿದ್ದ ವಿಮಾನ ನಿಲ್ದಾಣ ಹಾಗೂ ರನ್‌ವೇ ಅಭಿವೃದ್ಧಿಯನ್ನು ನನ್ನ ಅವಧಿಯಲ್ಲಿ ಕೇವಲ ಮೂರು ವರ್ಷಗಳ ಅವಧಿಯಲ್ಲಿ ಭೂಸ್ವಾಧೀನ ಹಾಗೂ ರನ್ ವೇ ವಿಸ್ತರಣೆ ಮಾಡಿ ಎಲ್ಲಾ ಸೌಲಭ್ಯಗಳನ್ನು ಕೊಡಿಸಿದ್ದೇನೆ ಎಂದರು.

MR Vasudeva ವಿಮಾನ ನಿಲ್ದಾಣದಲ್ಲಿ ತ್ರಿ ಭಾಷಾ ಸೂತ್ರದ ಅಡಿಯಲ್ಲಿ ಕನ್ನಡ ಸ್ಥಾನವನ್ನು ದೊರಕಿಸಲು ಪ್ರಯತ್ನ ಪಟ್ಟು ಯಶಸ್ವಿಯಾಗಿದ್ದೇನೆ. ನಾಮಫಲಕಗಳು ಕನ್ನಡದಲ್ಲಿರುವಂತೆ ನೋಡಿಕೊಂಡಿದ್ದೇನೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ಘೋಷಣೆ ಮಾಡುವಂತೆ ನಿರ್ದೇಶಿಸಿದ್ದೇನೆ. ನಾನು ನಿವೃತ್ತನಾದ ಮೇಲೂ ಕರಾವಳಿ ಪ್ರದೇಶದ ಸಾಂಸ್ಕೃತಿಕ ಸಂಘಟನೆಗಳಲ್ಲಿ ಹಲವಾರು ಜವಾಬ್ದಾರಿಯನ್ನು ಹೊತ್ತು ನನ್ನ ಪಾತ್ರವನ್ನು ತಕ್ಕಮಟ್ಟಿಗೆ ನಿರ್ವಹಿಸಿದ್ದೇನೆ. ದೇವಸ್ಥಾನಗಳ ಜೀರ್ಣೋದ್ಧಾರ, ಯಕ್ಷಗಾನ ಸಮಿತಿಗಳು, ಸಂಗೀತ ಪರಿಷತ್ತು ಮತ್ತು ಸಂಸ್ಕೃತ ಭಾರತೀಗಳ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ. ಕನ್ನಡ ಬಳಗ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕನ್ನಡ ಉಪನ್ಯಾಸಗಳನ್ನು ಏರ್ಪಡಿಸಿದ್ದೇನೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹರಿಕೃಷ್ಣ ಪುನರೂರು, ಕೆ. ಮಹಾಬಲ ಶೆಟ್ಟಿ, ಯು. ರಾಮ ರಾವ್, ಕೆ.ಮಹಾಲಿಂಗ ಪಾಟಾಲಿ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English