ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಗ್ರಾಮಗಳನ್ನು ODF Plus Aspiring ಎಂದು ಘೋಷಿಸುವ ಕುರಿತು ಹರೀಶ್ ಆರ್ ಉಪನಿರ್ದೇಶಕರು ಸ್ವಚ್ಛ ಭಾರತ್ ಮಿಷನ್ (ಗ್ರಾ), RDWSD ಇವರು ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು ತಾಲ್ಲೂಕುಗಳ PDO ಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಸ್ ಕದಮ್ ಸ್ವಚ್ಛ ಹರ್ ದಮ್ ಕಾರ್ಯಕ್ರಮ ದಂಗವಾಗಿ ಮಾಹಿತಿ ಇರುವ ಪೋಸ್ಟರ್ ಗಳನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವಿನಲ್ಲಿ ನಿರ್ಮಾಣವಾಗುತ್ತಿರುವ MRF ಘಟಕದ ಕಾಮಗಾರಿ ಸ್ಥಳಕ್ಕೆ ಹರೀಶ್ ಆರ್ ಉಪನಿರ್ದೇಶಕರು ಸ್ವಚ್ಛ ಭಾರತ್ ಮಿಷನ್ (ಗ್ರಾ), RDWSD ಇವರು ಭೇಟಿ ನೀಡಿದರು.
ಗ್ರಾ.ಕು.ನೀರು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಮತ್ತು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English