- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

srinivas Poojary [1]ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ.

ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ, ಬೊಮ್ಮಾಯಿ ಸಂಪುಟದಲ್ಲೂ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನೊಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.