ಕಾಂಗ್ರೆಸ್ಸಿನಿಂದ ಪ್ರಭಲ ಸ್ಪರ್ಧಿ ಕಣಕ್ಕೆ , ವಿಧಾನ ಪರಿಷತ್ ಚುನಾವಣಾ ಸ್ಪರ್ಧಾಕಣದಿಂದ ಹಿಂದೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

4:00 PM, Saturday, November 20th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

mn Rajendra-Kumarಮಂಗಳೂರು  : ಅದ್ದೂರಿಯಾಗಿ ಚುನಾವಣಾ ಕಚೇರಿಯನ್ನು ತೆರೆದು ವಿಧಾನ ಪರಿಷತ್ ಚುನಾವಣೆ ಸ್ಪರ್ಧೆಗೆ ಇಳಿದಿದ್ದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಕೊನೆಯ ಕ್ಷಣದಲ್ಲಿ ಸ್ಪರ್ಧಾಕಣದಿಂದ ಹಿಂದೆ ಸರಿದಿದ್ದಾರೆ.

ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆ. ಸಹಕಾರಿ ಕ್ಷೇತ್ರ ಪವಿತ್ರವಾಗಿದ್ದು, ನಾನು ಸ್ಪರ್ಧಿಸಿದರೆ ಅದಕ್ಕೆ ರಾಜಕೀಯ ಬಣ್ಣ ಬರಲಿದೆ. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಎದುರಾಗಬಹುದು. ಹಾಗಾಗಿ ಡಿಸೆಂಬರ್ 10ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರನಾಗಿಯೂ ಸ್ಪರ್ಧಿಸುವುದಿಲ್ಲ ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದ್ದಾರೆ.

ಸಹಕಾರಿ ಸಚಿವ ಸೋಮಶೇಖರ್ ಅವರ ಹೇಳಿಕೆಯ ಕುರಿತಂತೆ ಪ್ರತಿಕ್ರಿಯಿಸಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ರಾಜಕೀಯ ವೇದಿಕೆಯಲ್ಲಿ ಅವರು ಮಾತಾಡಿದ್ದಾರೆ. ನಾವಿಬ್ಬರು ಸ್ನೇಹಿತರು. ಯಾವುದೋ ಒತ್ತಡದಿಂದ ಅವರು ಮಾತನಾಡಿರಬಹುದು. ಸಾಕಷ್ಟು ಪ್ರಶಸ್ತಿಗಳು ಸಹಕಾರ ಕ್ಷೇತ್ರಕ್ಕೆ ಬಂದಿರುವಾಗ ಅವ್ಯವಹಾರದ ಪ್ರಶ್ನೆ ಎಲ್ಲಿಂದ ಎಂದು ಅವರು ಪ್ರಶ್ನಿಸಿದರು.ಸಹಕಾರಿ ಕ್ಷೇತ್ರ ನನಗೆ ಇಷ್ಟೊಂದು ಸ್ಥಾನ ಮಾನ ನೀಡಿದೆ. ಹಾಗಾಗಿ ಮುಂದೆಯೂ ನಾನು ರಾಜಕೀಯ ಸ್ಪರ್ಧೆಗೆ ಹೋಗಲಾರೆ. ನಾನು ತಟಸ್ಥನಾಗಿದ್ದು ಮುಂದುವರಿಯಲಿದ್ದೇನೆ. ಹಾಗಿದ್ದರೂ ನಾನು ಒಳ್ಳೆಯ ಕೆಲಸ ಮಾಡುವವರಿಗೆ ಸದಾ ಬೆಂಬಲವನ್ನು ನೀಡಲಿದ್ದೇನೆ ಎಂದಿದ್ದಾರೆ.

ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಕಾಂಗೆಸ್ಸಿನಿಂದ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅಲ್ಲಿ ಟಿಕೆಟ್ ಸಿಗದೇ ಇದ್ದುದರಿಂದ ಬಳಿಕ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು. ಈಗ ಮಂಜುನಾಥ್ ಭಂಡಾರಿಯವರ ಹೆಸರು ದಕ್ಷಿಣಕನ್ನಡ ಜಿಲ್ಲೆಯಿಂದ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English