ಸೋಮೇಶ್ವರ ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ಎಸೆದ ಯುವತಿಯರಿಗೆ ದಂಡ ಹಾಕಿದ ಪುರಸಭೆ

7:42 PM, Sunday, November 21st, 2021
Share
1 Star2 Stars3 Stars4 Stars5 Stars
(No Ratings Yet)
Loading...

SomeshwaraFineಮಂಗಳೂರು :  ಬೀಚ್ ಗೆ ಪ್ರವಾಸಕ್ಕೆ ಬಂದ  ಯುವತಿಯರಿಬ್ಬರು  ಸೋಮೇಶ್ವರ ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ಎಸೆದಕ್ಕೆ ರೂ. 500 ದಂಡ ವಿಧಿಸಿದ ಘಟನೆ ಭಾನುವಾರ ನಡೆದಿದೆ.

ಪ್ರವಾಸಿಗರು  ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುವುದರಿಂದ ಸೋಮೇಶ್ವರ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿವಿದ ಸಂಘ ಸಂಸ್ಥೆಗಳ ನೇತ್ರತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ 1 ಟನ್ ನಷ್ಟು ಪ್ಲಾಸ್ಟಿಕ್ ಸಂಗ್ರಹಿಸಿದ್ದು, ಅಲ್ಲದೆ ಸ್ಥಳದಲ್ಲಿ ಪ್ಲಾಸ್ಟಿಕ್ ಹಾಕದಂತೆ ಎಚ್ಚರಿಸಿ ನಾಮಫಲಕವನ್ನು ಹಾಕಿದೆ.

ಭಾನುವಾರ ಕಾರ್ಯಾಚರಣೆ ನಡೆಸಿದ ಪುರಸಭೆ ಅಧಿಕಾರಿಗಳು ಪ್ರವಾಸಿಗರು ಪ್ಲಾಸ್ಟಿಕ್ ಹಾಕಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ರೂ.500 ದಂಡ ವಿಧಿಸಿ, ಸ್ಥಳದಲ್ಲಿ ಕಾರ್ಯಾಚರಿಸುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸು ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English