ಮಂಗಳೂರು : ವಿಧಾನ ಪರಿಷತ್ ಸ್ಪರ್ಧೆಗೆ ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿ.10ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯ ಒಪ್ಪಿಗೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಸೋಮವಾರ ಅಭ್ಯರ್ಥಿಯಾಗಿ ಪ್ರಕಟಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್‌ಡಿ ಮಾಡಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ್ ಭಂಡಾರಿ 1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ರಾಜಕೀಯ ಪ್ರವೇಶ ಪಡೆದರು. ಬಳಿಕ ಚಿಕ್ಕಮಗಳೂರು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಅಮೇರಿಕಾದ ಪ್ರತಿಷ್ಠಿಯ ‘ಐಸನ್ ಹೂವರ್’ ಫೆಲೋಶಿಪ್ ಪಡೆದಿದ್ದರು. ಇಂದಿರಾ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸು ವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2014ರಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಲೋಕಸಭೆಗೆ ಸ್ಪರ್ಧಿಸಿದ್ದರು.
Click this button or press Ctrl+G to toggle between Kannada and English