ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

2:12 PM, Tuesday, November 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Manjunath Bhandary ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್‌’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್‌ಡಿ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English