ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದ ಫೋಟೊ ವೈರಲ್, ದೇವಸ್ಥಾನದ ಭದ್ರತೆ ಇನ್ನಷ್ಟು ಬಿಗಿ

9:38 PM, Tuesday, November 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Murudeshwara-Shiva-Statueಭಟ್ಕಳ  : ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ  ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಹೇಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ಅಂಶುಲ್ ಸಕ್ಸೇನಾ ಎಂಬುವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’  ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’   ಎಂಬ ವಾಕ್ಯವನ್ನು ಬರೆಯಲಾಗಿದೆ. ಅಲ್ಲದೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.

ಇನ್ನು ಪೋಸ್ಟ್ ನ ಅಧಿಕೃತತೆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲವಾದರೂ, ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅಂಶುಲ್ ಸಕ್ಸೇನಾ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರವು ಮುರುಡೇಶ್ವರ ದೇವಸ್ಥಾನದ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English