ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಎಂಟು ಮಂದಿ ಬಂಧನ

11:48 PM, Saturday, November 27th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nagabana Accucedಮಂಗಳೂರು : ನಗರದ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್ ಮತ್ತು ನೌಶಾದ್ ಬಂಧಿತ ಆರೋಪಿಗಳು.

ಆರೋಪಿಗಳನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವುದು ಗಮನಕ್ಕೆ ಬಂದಿದೆ. ಅವರ ಪತ್ತೆಗೂ ಕಾರ್ಯಾಚರಣೆ ಮುಂದುವರಿದಿದೆ ಎಂದು  ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಈ ಪ್ರಕರಣದ ಮೂಲ ಸೂತ್ರಧಾರರು ಸರಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದು ಜಾಮೀನಿನ ಮೂಲಕ ಹೊರಬಂದಿರುವ ಇರ್ಷಾದ್ ಮತ್ತು ಅಚ್ಚಿ ಎಂಬ ಆರೋಪಿಗಳು.   ಇವರು ನಗರದಲ್ಲಿ ಕಳ್ಳತನಕ್ಕೆ ಪೊಲೀಸರು ಅಡ್ಡಿಯಾಗುತ್ತಿದ್ದು, ಅವರ ಗಮನ ಬೇರೆಡೆ ಸೆಳೆಯಲು ಸಂಚು ರೂಪಿಸಿದ್ದರು. ಇದನ್ನು ತಮ್ಮ ಬಳಗದ ಸಫ್ವಾನ್ ಕಾವೂರು ಗಮನಕ್ಕೆ ತಂದಿದ್ದರು. ಸಫ್ವಾನ್ ತಂಡದವರು ಸೇರಿಕೊಂಡು ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದರೆ ಪೊಲೀಸರ ಗಮನ ಅದರತ್ತ ಕೇಂದ್ರೀಕೃತವಾಗುತ್ತದೆ ಎಂದು ನಾಗಬನಗಳಿಗೆ ಹಾನಿಯುಂಟು ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಈ ಮಾಹಿತಿ ನೀಡಿದ್ದಾರೆ. ಇನ್ನಷ್ಟು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

40 ಮಂದಿಯನ್ನು ಒಳಗೊಂಡ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English