ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

11:34 PM, Monday, November 29th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Dharmasthala-Deepothsava1ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು.
Dharmasthala-Deepothsava
ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ ಕಲ್ಯಾಣಕ್ಕಾಗಿ ಸತ್ಕಾರ್ಯಗಳನ್ನು ಮಾಡುವುದಾಗಿ ಅವರು ತಿಳಿಸಿದರು.

ಧರ್ಮದ ಜಾಗೃತಿ ಹಾಗೂ ಉತ್ಥಾನದೊಂದಿಗೆ ಅಧರ್ಮ, ಅನ್ಯಾಯದ ನಾಶವೇ ನಮ್ಮ ಗುರಿಯಾಗಿರಬೇಕು. ಧರ್ಮಸ್ಥಳವು ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ಸದಾ ಜಾಗೃತಿಯಲ್ಲಿದ್ದು ನೆಲೆ ನಿಂತಿರುವ ಪವಿತ್ರ ಕ್ಷೇತ್ರವಾಗಿದೆ. ದೇಶ-ವಿದೇಶಗಳಿಂದ ಭಕ್ತರು ಕ್ಷೇತ್ರದ ಬಗ್ಗೆ ಹೊಂದಿರುವ ಅಪಾರ ಶ್ರದ್ಧಾ-ಭಕ್ತಿ ಮತ್ತು ಗೌರವವೇ ಇದಕ್ಕೆ ಸಾಕ್ಷಿಯಾಗಿದೆ. ಲೋಕಕಲ್ಯಾಣಕ್ಕಾಗಿ ಸರ್ವಜನಹಿತ ಕಾರ್ಯಗಳನ್ನು ನಿರಂತರ ತಾನು ಮುಂದುವರಿಸುವುದಾಗಿ ಅವರು ಹೇಳಿದರು.

Dharmasthala-Deepothsava3

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English