ಕಲ್ಲೇಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ

11:37 PM, Monday, December 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

BJP-MLCಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, “ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದವರು. ಧಾರ್ಮಿಕ ದತ್ತಿ ಇಲಾಖೆಗೆ ಕೋಟ ಮಂತ್ರಿಯಾದಾಗ ಹಳ್ಳಿ ಹಳ್ಳಿಯ ಸಣ್ಣಪುಟ್ಟ ದೇವಸ್ಥಾನಗಳಿಗೂ ಅನುದಾನ ನೀಡಿದರು. ಸಾಮೂಹಿಕ ವಿವಾಹ ಏರ್ಪಡಿಸಿ ಬಡಕುಟುಂಬಕ್ಕೆ ನೆರವಾದರು. ಸಮಾಜ ಕಲ್ಯಾಣ ಇಲಾಖೆ ಮಂತ್ರಿಯಾಗಿರುವ ಈ ವೇಳೆಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭ ಸಿಗಬೇಕೆಂದು ಶ್ರಮಿಸುತ್ತಿದ್ದಾರೆ. ಇಂತಹ ಅಭ್ಯರ್ಥಿಗೆ ಬಹುಮತ ಕೊಟ್ಟು ಗೆಲ್ಲಿಸಬೇಕಾಗಿದೆ” ಎಂದರು.

ಸಭೆಯನ್ನು ಉದ್ದೇಶಿಸಿ ಮಾತಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು, “ಮಹಾತ್ಮಾ ಗಾಂಧಿ ರಾಮರಾಜ್ಯದ ಕಲ್ಪನೆ ಕನಸನ್ನು ಕಂಡರು. ರಾಮರಾಜ್ಯ ನಿರ್ಮಾಣವಾಗಬೇಕಾದರೆ ಗ್ರಾಮಗಳ ಉದ್ಧಾರವಾಗಬೇಕು. ಅದು ಪಂಚಾಯತ್ ಸದಸ್ಯರ ಶ್ರಮದಿಂದ ಮಾತ್ರ ಸಾಧ್ಯ. ಕೋಟ ಶ್ರೀನಿವಾಸ್ ಪೂಜಾರಿಯವರು ಹಿಂದೆ ಪಂಚಾಯತ್ ಸದಸ್ಯರಾಗಿದ್ದಾಗ ಪಂಚಾಯತ್ ಮತ್ತು ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿದವರು. ಅಂದಿನಿಂದ ಇಂದಿನವರೆಗೂ ಪಂಚಾಯತ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿರುವ ಶ್ರೀನಿವಾಸ ಪೂಜಾರಿಯವರು ಗೆದ್ದರಷ್ಟೇ ಸಾಲದು ಬಹುಮತ ಪಡೆಯಬೇಕು. ಮುಂದಿನ ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಒಂದೇ ಒಂದು ಅಮೂಲ್ಯ ಮತವನ್ನು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೇ ನೀಡುವ ಮೂಲಕ ದಿಗ್ವಿಜಯದಲ್ಲಿ ಭಾಗಿಯಾಗಬೇಕು” ಎಂದು ಮನವಿ ಮಾಡಿದರು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉದಯ ಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ, ಮಂಡಲ ಪ್ರಭಾರಿ ವೆಂಕಟ್ ಒಳಲಂಬೆ, ಹರಿಕೃಷ್ಣ ಬಂಟ್ವಾಳ, ಮಾಧ್ಯಮ ಪ್ರಮುಖ್ ರಣ್ ದೀಪ್ ಕಾಂಚನ್, ಸತೀಶ್ ಕುಂಪಲ, ದೇವದಾಸ್ ಶೆಟ್ಟಿ, ಸಂತೋಷ್ ರೈ ಬೋಳಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿತಿನ್ ಕುಮಾರ್, ಕಸ್ತೂರಿ ಪಂಜ, ಮಂಜುಳಾ ರಾವ್, ರಾಧಾಕೃಷ್ಣ ರೈ, ಜಯಂತಿ ನಾಯ್ಕ್, ಜಯಶ್ರೀ, ಭರತ್ ಕುಮಾರ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English