ನಳಿನ್ ಕುಮಾರ್ ಕಟೀಲ್ ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು, ಅವರು ಮತ್ತೆ ಮರಳಿ ಕಾಂಗ್ರೆಸ್​ ಪಕ್ಷಕ್ಕೆ ಬರಲಿ

9:27 PM, Tuesday, December 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Khaderಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು‌ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಮತ್ತೆ ಅವರು ಕಾಂಗ್ರೆಸ್ಗೆ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ಅಹ್ವಾನ ನೀಡಿದ್ದಾರೆ

ಖಾದರ್ ಮತ್ತು ರಮಾನಾಥ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು.

ವಿನಯಕುಮಾರ್ ಸೊರಕೆ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ವೇಳೆ ದುಡಿದವರು. ಅವರಿಗೆ ಬಿಜೆಪಿಗೆ ಹೋಗಿ ಇಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆಸುವ ಉತ್ಸಾಹವಿದೆ. ಅವರು ಸಂತೋಷದಲ್ಲಿರಬೇಕಾದರೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರಲಿ ಎಂದು ಆಹ್ವಾನ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English