ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ, ಬ್ರಹ್ಮ ರಥೋತ್ಸವ

9:12 PM, Friday, December 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kukke-Subrahmanyaಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವದ ಪ್ರಯುಕ್ತ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು.

ಗುರುವಾರ ಬೆಳ್ಳಗೆ 6.58ರ ವೃಶ್ಚಿಕ ಲಗ್ನ ಸುಮೂಹರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢರಾಗಿ  ಬ್ರಹ್ಮ ರಥೋತ್ಸವ ಮುನ್ನ ವಿವಿಧ ವೈದಿಕ ಕಾರ್ಯ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಮಹಾಪೂಜೆ ನೇರವೇರಿದ ಬಳಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನಡೆಯಿತು.  ಬೆಳ್ಳಗೆ 6.58 ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ, ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾಗಿ ಬಳಿಕ ಪಂಚಮಿ ತೇರನ್ನು ಎಳೆಯಲಾಯಿತು.
Kukke-Subrahmanya
ರಾಜ್ಯದ ಅತ್ಯಂತ ದೊಡ್ಡ ರಥಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ  ಬ್ರಹ್ಮರಥವೂ ಒಂದಾಗಿದೆ. ಚಂಪಾ ಷಷ್ಠಿಯ ದಿನದಂದು ಈ ರಥೋತ್ಸವ ನಡೆಯುಯುತ್ತದೆ. ಅಸಂಖ್ಯಾತ ಭಕ್ತರು ಬ್ರಹ್ಮ ರಥೋತ್ಸವವನ್ನು  ನೋಡಲು ರಥ ಬೀದಿಯಲ್ಲಿ ಸೇರುತ್ತಾರೆ.  ಜಾತ್ರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಬೇರೆ ಬೇರೆ ಊರುಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ.

ಬ್ರಹ್ಮರಥ ಎಳೆಯುವುದು ಪುಣ್ಯದ ಕೆಲಸ ಎನ್ನುವ ನಂಬಿಕೆ ಕ್ಷೇತ್ರದಲ್ಲಿದ್ದು, ಈ ಕಾರಣಕ್ಕಾಗಿಯೇ ಮುಂಜಾನೆ ನಡೆಯುವ ಈ ರಥೋತ್ಸವದಲ್ಲಿ ರಥ ಎಳೆಯಲು ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಸೇರುತ್ತಾರೆ. ಸೇವೆಯ ರೂಪದಲ್ಲೂ ಬ್ರಹ್ಮರಥ ಎಳೆಯುವ ಅವಕಾಶವನ್ನೂ ಕ್ಷೇತ್ರದಲ್ಲಿ ನೀಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English