ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

9:49 PM, Saturday, December 11th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

Bus Loveಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ.

ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಂಡೇಶ್ವರ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
Bus-Attacking
ಹಿಂದೂ ಹುಡುಗಿ ಮುಸ್ಲಿಂ ಹುಡುಗನೊಟ್ಟಿಗೆ ಸಿಕ್ಕಿಬಿದ್ದಿದ್ದಾಳೆ ಎಂಬ ವೀಡಿಯೋವನ್ನು ಸಾರ್ವಜನಿಕ ಜಾಲತಾಣಗಳಲ್ಲಿ ವೈರಲ್  ಆಗಿತ್ತು. ಯುವಕ ಮತ್ತು ಯುವತಿ  ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಅವರ ಕುಟುಂಬದವರನ್ನು ಸಂಪರ್ಕಿಸಲಾಗಿದೆ. ಅವರ ಹೇಳಿಕೆ ಪಡೆಯಲಾಗುವುದು. ಯುವಕ- ಯುವತಿಯರನ್ನು ಕೂಡ ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಾಮಂಜೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಹುಡುಗ ಮತ್ತು ಹುಡುಗಿ ಬಸ್‌ನಲ್ಲಿ ಉಡುಪಿಗೆ ತೆರಳುತ್ತಿದ್ದರು. ಹುಡುಗಿ ಉಡುಪಿಯವಳಾಗಿದ್ದರೆ, ಹುಡುಗ ಶಿವಮೊಗ್ಗದವನು ಎಂದು ಹೇಳಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English