- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಹಿಳಾ ಗ್ರಾಹಕಿಗೆ ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆ ಮುಟ್ಟಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

shamshudin [1]ಮುಲ್ಕಿ : ಚಪ್ಪಲಿ ಖರೀದಿಗೆ ಹೋಗಿದ್ದ ಮಹಿಳಾ ಗ್ರಾಹಕಿ ಯೊಬ್ಬರನ್ನು ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಭಾನುವಾರ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಂಗಡಿ ಮಾಲಕ ಸಂಶುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಾನುವಾರ  ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಅದರ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲಕರು ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು  ಹೋಗಿ ಆಕೆಯ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಹಿಳಾ ಗ್ರಾಹಕಿ ನೀಡಿದ ದೂರಿನಂತೆ ಅಂಗಡಿ ಮಾಲಿಕನಾದ ಸಂಶುದ್ದಿನ್ ಎಂಬಾತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.