ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಗೆದ್ದವರ ವಿವರ ಇಲ್ಲಿದೆ

12:12 PM, Tuesday, December 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

MLC-election ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ  ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲ್ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. 2023ರ ಕರ್ನಾಟಕ ವಿಧಾನಸಭಾ  ಹಿನ್ನೆಲೆಯಲ್ಲಿ ಈ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್  ಎರಡಕ್ಕೂ ಚುನಾವಣೆಗಳು ಮಹತ್ವದ್ದಾಗಿವೆ. ಫಲಿತಾಂಶ ಪ್ರಕಟವಾದ ಬಳಿಕ ವಿಧಾನಪರಿಷತ್ ರಚನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೇಲ್ಮನೆಯಲ್ಲಿ 32 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 12 ಸದಸ್ಯರನ್ನು ಹೊಂದಿರುವ ಜೆಡಿಎಸ್ ಬೆಂಬಲವನ್ನು ಅವಲಂಬಿಸದೆ, ಸ್ಪಷ್ಟ ಬಹುಮತವನ್ನು ಪಡೆಯಲು ಪ್ರಯತ್ನಿಸುತ್ತಿದೆ.

ಕೊಡಗಿನಲ್ಲಿ ಬಿಜೆಪಿ
ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ಅಭ್ಯರ್ಥಿ ಮಂಥರ್ ಗೌಡ ಅವರು ಸೋಲುಕಂಡಿದ್ದು, ಕೊಡಗು ಬಿಜೆಪಿ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತಾಗಿದೆ.

ಹಾಸನದಲ್ಲಿ ಜೆಡಿಎಸ್
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. 2281 ಮತಗಳನ್ನು ಪಡೆದ ಸೂರಜ್, 1533 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 748 ಮತ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್ 421 ಮತ ಪಡೆದಿದ್ದಾರೆ.

ಬೀದರ್ನಲ್ಲಿ ಕಾಂಗ್ರೆಸ್
ಗಡಿ ಜಿಲ್ಲೆ ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ ಪಾಟೀಲ್ 220 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ
ಶಿವಮೊಗ್ಗದಲ್ಲಿ ಚಲಾಚಣೆಯಾಗಿದ್ದ 4158 ಮತಗಳು ಪೈಕಿ 2208 ಮತ ಬಿಜೆಪಿ ಅಭ್ಯರ್ಥಿ ಪಾಲಾಗಿದ್ದು, ಅರುಣ್ ಗೆಲುವಿನ ನಗೆ ಬೀರಿದ್ದಾರೆ.

ಚಿತ್ರದುರ್ಗ ಬ್ರೇಕಿಂಗ್
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ 2617 ಮತ, ಕಾಂಗ್ರೆಸ್ 2263 ಮತ ಪಡೆದಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English