ಸುಳ್ಯ : ತನ್ನ ಅಂಗಡಿಯಲ್ಲೇ ಗ್ರಾಮ ಪಂಚಾಯತ್ ಮಾಜಿ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ವರದಿಯಾಗಿದೆ.
ಮರ್ಕಂಜ ಗ್ರಾಮದ ಕಾಯರ ನಿವಾಸಿ ಭೋಜಪ್ಪ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಅವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು.
ಭೋಜಪ್ಪ ಅವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು, ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರ-ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Click this button or press Ctrl+G to toggle between Kannada and English