ಮಂಗಳೂರು : ಲೋಕಾಯುಕ್ತರ ಹುದ್ದೆ ರಾಜ್ಯದಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲದಿಂದ ಖಾಲಿಯಿದ್ದು ಬಿಜೆಪಿ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸಮಯ ಕಳೆಯುತ್ತಿದೆ. ಬಿಜೆಪಿ ರಾಷ್ಟ್ರ ನಾಯಕರು, ಮುಖಂಡರು ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಇವರು ಜನರಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಿನ್ನೆ ರಾಜ್ಯದಲ್ಲಿ ಲೋಕಾಯುಕ್ತರನ್ನು, ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ ಮಾತನಾಡಿದರು.
ಬಿಜೆಪಿ ನೇತೃತ್ವದ ಸರ್ಕಾರವಿರುವ ಯಾವುದೇ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ನೇಮಕ ಮಾಡದೇ ಇರುವುದನ್ನು ಗಮನಿಸಿದಾಗ ಅವರು ಭ್ರಷ್ಟಾಚಾರದ ವಿರುದ್ಧ ಯಾವ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ರಾಜ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಬಹುತೇಕ ಮಂತ್ರಿಗಳು ಗಣಿ ಹಗರಣ, ಭೂ ಹಗರಣ, ಲಂಚ ಹಗರಣ ಈ ರೀತಿ ಅನೇಕ ಭ್ರಷ್ಟಾಚಾರ ಹಗರಣಗಳಲ್ಲಿ ಶಾಮೀಲಾಗಿರುವುದು ನಿಜಕ್ಕೂ ಶೋಚನೀಯ. ಇದರಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿರುವುದು ಮಾತ್ರವಲ್ಲದೇ, ಪ್ರಜಾಪಭುತ್ವ ವ್ಯವಸ್ಥೆಗೆ ಮಾಡಿರುವ ದ್ರೋಹವಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ನ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English