ಪುಟಪಾತ್ ಗೆ ಅಡ್ಡಲಾಗಿ ವ್ಯಾಪಾರ, ವ್ಯಾಪಾರಿಗಳ ಸಾಮಾಗ್ರಿ ಮತ್ತು ಅಂಗಡಿ ತೆರವು

4:05 PM, Friday, December 24th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

petty Shopಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್‌ನ ಬಳಿ ಪುಟಪಾತ್ ಗೆ ಅಡ್ಡಲಾಗಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ಸಾಮಾಗ್ರಿಗಳನ್ನು ಮತ್ತು ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶುಕ್ರವಾರ ಬೆಳಿಗ್ಗೆ  ಪಾಲಿಕೆ ಅಧಿಕಾರಿಗಳು ನಡೆಸಿದರು.

ಬುಧವಾರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಎಲ್ಲಾ ಗೂಡಂಗಡಿ ಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಗುರುವಾರ ಬೆಳಗ್ಗಿನಿಂದಲೇ ಕಂದಾಯ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ಕಾರ್ಯಾಚರಣೆ  ನಡೆಸಿದ್ದಾರೆ.

ಸಾರ್ವಜನಿಕರು ನಡೆದಾಡುವ ಫುಟ್‌ಪಾತ್ ಅತಿಕ್ರಮಿಸಿ, ಗೂಡಂಗಡಿ ನಿರ್ಮಿಸಲಾಗಿದೆ ಎಂದು ಹಿರಿಯ ನಾಗರಿಕರ ಸಹಿತ ಹಲವು ಮಂದಿ ನಿರಂತರವಾಗಿ ದೂರು ನೀಡಿರುವ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಹಿಂದೆಯೂ ಕಾರ್ಯಾಚರಣೆ ಮಾಡಲಾಗಿತ್ತು. ಆದರೆ ಮತ್ತೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುತ್ತಾರೆ. ಹಾಗಾಗಿ ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

petty Shopತಳ್ಳು ಗಾಡಿಗಳು, ಗೂಡ್ಸ್ ರಿಕ್ಷಾ ಕ್ಯಾಂಟಿನ್ ಸಹಿತ ವಿವಿಧ ರೀತಿಯ ಅಂಗಡಿಗಳನ್ನು ಜೆಸಿಬಿ ಸಹಾಯದಿಂದ ತೆರವು ಗೊಳಿಸಲಾಗಿದೆ. ಎಲ್ಲವನ್ನೂ ನಜ್ಜುಗುಜ್ಜು ಮಾಡಿ ವಾಹನಕ್ಕೆ ಹಾಕಿಕೊಂಡು ಹೋಗಲಾಗಿದೆ. ಗುರುವಾರ ನಡೆದ ಈ ಕಾರ್ಯಾಚರಣೆಗೆ ವ್ಯಾಪಾರಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಮ್ಮ ಬಳಿ ಬೀದಿಬದಿ ವ್ಯಾಪಾರ ಮಾಡಲು ಪಾಲಿಕೆ ನೀಡಿರುವ ಕಾರ್ಡ್ ಇದೆ ಎಂದು ಕೆಲವು ವ್ಯಾಪಾರಿಗಳು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಬೀದಿಬದಿ ವ್ಯಾಪಾರದ ಕಾರ್ಡ್ ಒಂದೇ ಕಡೆಯಲ್ಲಿ ಅಂಗಡಿ ಮಾಡುವುದಕ್ಕೆ ಇರುವುದಲ್ಲ. ತಳ್ಳುಗಾಡಿಯಲ್ಲಿ ವಿವಿಧೆಡೆ ತೆರಳಿ ಮಾರಾಟ ಮಾಡುವುದಕ್ಕೆ ನೀಡಿರುವುದು. ಒಂದೇ ಕಡೆಯಲ್ಲಿ ನಿಂತು ಮಾರಾಟ ಮಾಡುವುದು ನಿಯಮದ ಉಲ್ಲಂಘನೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English