ಮಂಗಳೂರು : ಜನವರಿ 30ರಂದು ಮಂಗಳೂರಿನ ತುಳು ಭವನದ ಸಿರಿ ಚಾವಡಿಯಲ್ಲಿ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಂಯುಕ್ತವಾಗಿ ಆಯೋಜಿಸುತ್ತಿರುವ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಎಂಟನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನದ ಬಿಡುಗಡೆ ಸಮಾರಂಭ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸಾಹಿತ್ಯ ಪೋಷಕ, ಸಂಘಟಕ ಗುರುಪ್ರಸಾದ್ ಕಡಂಬಾರ್ ಅವರು ಲಾಂಛನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು,ಕವಿ ರಘು ಇಡ್ಕಿದು,ವಿಜಯವಾಣಿ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ, ಪ್ರೊಫೆಸರ್ ಪಿ.ಕೃಷ್ಣಮೂರ್ತಿ, ಹಿರಿಯ ಲೇಖಕ ಜಯಪ್ರಕಾಶ್ ಪುತ್ತೂರು, ಅಪರಾಧ ಮತ್ತು ಸಂಚಾರ ಪೊಲೀಸ್ ಉಪ ಆಯುಕ್ತ ಬಿ.ಪಿ.ದಿನೇಶ್ ಕುಮಾರ್, ಮಂಗಳೂರು ಚುಸಾಪ ಕಾರ್ಯದರ್ಶಿ ವಿಜಯಲಕ್ಷ್ಮೀ ಕಟೀಲು, ಉಪಾಧ್ಯಕ್ಷೆ ಅರುಣಾ ನಾಗರಾಜ್, ಲತೀಶ್ ಸಂಕೊಳಿಗೆ, ಜತೆಕಾರ್ಯದರ್ಶಿ ವೆಂಕಟೇಶ್ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English