ಮಂಗಳೂರು : ಇತ್ತೀಚಿಗೆ ಕೂಳೂರುವಿನಲ್ಲಿ ನಾಗನಕಲ್ಲುಗಳಿಗೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿತ್ತು. ಇದರ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಕೂಡ ನಡೆದಿತ್ತು.
ಭಾನುವಾರ ಅದೇ ಸ್ಥಳದಲ್ಲಿ ನಾಗನ ಕಲ್ಲಿನ ಪುನರ್ ಪ್ರತಿಷ್ಠಾಪನೆ, ಆಶ್ಲೇಷ ಬಲಿ, ವಟು ಆರಾಧನೆ, ನವಕ ಪ್ರಧಾನ ಹೋಮ ಮತ್ತು ತಂಬಿಲ ಸೇವೆಯ ಕಾರ್ಯಕ್ರಮಗಳು ವೈದಿಕ ಮುಖೇನ ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಿತು.
ಈ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಆಗಮಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Click this button or press Ctrl+G to toggle between Kannada and English