ಮಂಗಳೂರು : ನಂದಿಗುಡ್ಡೆ ಸಮೀಪದ ಕೊರಗಜ್ಜ ದೈವದ ಗುಡಿಯ ಮುಂಭಾಗ ಕಿಡಿಗೇಡಿಗಳು ಕಾಂಡೋಮ್ ಹಾಕಿ ಪರಾರಿಯಾದ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು ಕಾಂಡೋಮ್ ಉಪಯೋಗಿಸಿ ಬಳಿಕ ಅದನ್ನು ಅಜ್ಜನ ಗುಡಿಯತ್ತ ಎಸೆದಿದ್ದಾರೆ. ಸ್ಥಳೀಯರು ಮತ್ತು ಭಕ್ತರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಅಶ್ಲೀಲ ವಸ್ತು ಎಸೆಯುವ ಮೂಲಕ ಭಕ್ತರ ಭಾವನೆಗೆ ದಕ್ಕೆ ತಂದಿದ್ದಾರೆ. ಶಾಂತಿ ಕದಡುವ ಕೃತ್ಯಕ್ಕೂ ಯತ್ನಿಸುತ್ತಿದ್ದಾರೆ. ತಕ್ಷಣ ಅಪರಾಧಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಕರು ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು. ಶಾಂತಿಯುತ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English