ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಪ್ರಯಾಣಿಕರಲ್ಲಿ ಒಮೈಕ್ರಾನ್‌ ಪತ್ತೆ

8:20 PM, Friday, December 31st, 2021
Share
1 Star2 Stars3 Stars4 Stars5 Stars
(No Ratings Yet)
Loading...

omicron-testಮಂಗಳೂರು : ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಂಗಳೂರಿನ ಇಬ್ಬರು ಪ್ರಯಾಣಿಕರಲ್ಲಿ ಕೊರೋನ ಜೊತೆ ಒಮೈಕ್ರಾನ್‌ ಪತ್ತೆಯಾಗಿದೆ.

ಅವರ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಡಲಾದ ಸಂದರ್ಭ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಲ್ಲಿಯೇ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗೊಳಪಡಿಸಲಾಗಿದೆ. ಅವರ ಗಂಟಲ ದ್ರವದ ಮಾದರಿಯನ್ನು ಜಿನೋಮಿಕ್ ತಪಾಸಣೆಗೊಳಪಡಿಸಿದಾಗ ಒಮೈಕ್ರಾನ್‌ ಸೋಂಕು ಪತ್ತೆಯಾಗಿದೆ.

ಅವರಿಬ್ಬರ ಪ್ರಾಥಮಿಕ ಸಂಪರ್ಕಿತರನ್ನು ಕೂಡಾ ಅಲ್ಲಿಯೇ ಪತ್ತೆ ಹಚ್ಚಿ ತಪಾಸಣೆಗೊಳಪಡಿಸಲಾಗಿದೆ. ಸೋಂಕಿತರು ಬೆಂಗಳೂರಿನ ಸರಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English