ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಮಾಧವ ಶೆಣೈ(87) ರವಿವಾರ ತುಂಬೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಜ.3ರಂದು ಮಧ್ಯಾಹ್ನ 12 ಗಂಟೆಗೆ ಅವರ ಜನ್ಮಸ್ಥಳ ಬಂಟ್ವಾಳದಲ್ಲಿ ನೆರವೇರಲಿದೆ. ಅದಕ್ಕೂ ಮೊದಲು ಬೆಳಗ್ಗೆ 9ರಿಂದ 10ರವರೆಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಸ್ತಿ ವಾಮನ ಶೆಣೈ 1943ರ ನವೆಂಬರ್ 6ರಂದು ಬಂಟ್ವಾಳದಲ್ಲಿ ಜನಿಸಿದರು. ಮಂಗಳೂರಿನ ಶಕ್ತಿನಗರದಲ್ಲಿ ವಿಶ್ವ ಕೊಂಕಣಿ ಕೇಂದ್ರವನ್ನು ಸ್ಥಾಪಿಸುವ ಮೂಲಕ ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಉಳಿವು ಮತ್ತು ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿ ಗಮನ ಸೆಳೆದಿದ್ದರು.
Click this button or press Ctrl+G to toggle between Kannada and English