ದ.ಕ. ಜಿಲ್ಲಾ ಪತ್ರಕರ್ತರ ಸಂಘದ ವಿಶೇಷ ಸಂಚಿಕೆ ಬಿಡುಗಡೆ

4:18 PM, Tuesday, January 4th, 2022
Share
1 Star2 Stars3 Stars4 Stars5 Stars
(No Ratings Yet)
Loading...

Sadhane Bookಕಲಬುರಗಿ : ಕಲಬುರಗಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಲಿ.)ಹಾಗೂ ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಲಬುರಗಿ ಇದರ ಸಹಯೋಗದಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ವರ್ಷಗಳ ಯಶೋಗಾಥೆಯ ಸಾಧನೆ ಸಂಭ್ರಮ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಕಲಬುರಗಿ ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ಕೇಂದ್ರ ಸಚಿವ ಭಗವಂತ ಖೂಬಾ,ಸಂಸದ ಉಮೇಶ್ ಜಾಧವ್,ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್, ಭಾಸ್ಕರ ರೈ ಕಟ್ಟ ಮೊದಲಾದವರಿದ್ದರು.

ಇದೇ ಸಂದರ್ಭದಲ್ಲಿ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ಬು ಯಶಸ್ವಿಯಾಗಿ ಸಂಘಟಿಸಿದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವನ್ನು ಅಭಿನಂದಿಸಲಾಯಿತು.
ಅಖಿಲಭಾರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಅವರು ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English