- Mega Media News Kannada - https://kannada.megamedianews.com -

ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Karnataka PUBoard [1]ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

ಮಾರ್ಚ್ 28 ರಂದು ಪ್ರಥಮ ಭಾಷೆ –ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಮಾರ್ಚ್ 30 ದ್ವಿತೀಯ ಭಾಷೆ –ಇಂಗ್ಲಿಷ್, ಕನ್ನಡ, ಏಪ್ರಿಲ್ 1 ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 8 ತೃತೀಯ ಭಾಷೆ ಹಾಗೂ ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳು ನಡೆಯಲಿವೆ.

ಪ್ರತಿ ದಿನ ಬೆಳಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳು, ಪೋಷಕರಿಗೆ ಆಕ್ಷೇಪಣೆಗಳಿದ್ದರೆ ಜ.6ರಿಂದ 14ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

sslc Exam [2]