ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆನ್‌ಲೈನ್ ಬುಕ್ಕಿಂಗ್‌ ಸೇವೆಗಳು ರದ್ದು

7:25 PM, Friday, January 7th, 2022
Share
1 Star2 Stars3 Stars4 Stars5 Stars
(5 rating, 1 votes)
Loading...

dharmasthalaಮಂಗಳೂರು  : ಕೋವಿಡ್-19 ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English