ದನದ ತಲೆ ಕತ್ತರಿಸಿ ರಸ್ತೆಯಲ್ಲಿಟ್ಟ ದುಷ್ಕರ್ಮಿಗಳು

7:45 PM, Thursday, January 13th, 2022
Share
1 Star2 Stars3 Stars4 Stars5 Stars
(5 rating, 1 votes)
Loading...

cow Headಮೂಡುಬಿದಿರೆ :  ದನದ ತಲೆ ಯನ್ನು ಕತ್ತರಿಸಿ ಮೂಡುಬಿದಿರೆ ತಾಲೂಕಿನ ಮಹಾವೀರ ಕಾಲೇಜು ಸಮೀಪದ ಕೊಡಂಗಲ್ಲು ಕೀರ್ತಿನಗರ ಕ್ರಾಸ್‌ ಬಳಿ ಎಸೆದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಹಸುವಿನ ಮುಂಡದಿಂದ ಬೇರ್ಪಟ್ಟಿದ್ದ ತಲೆಬುರುಡೆಯನ್ನು ಗೋಣಿ ಚೀಲದಲ್ಲಿ ಸುತ್ತಿ ರಸ್ತೆಯ ಪಕ್ಕದಲ್ಲಿ  ಎಸೆದಿದ್ದು .  ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೊಲೀಸರು ತಲೆಬುರುಡೆಯನ್ನು ಹೊರತೆಗೆಯುವ ವ್ಯವಸ್ಥೆ ಮಾಡಿದರು.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ.

ರಸ್ತೆ ಬದಿಯಲ್ಲಿ ಬಿಸಾಡಿ ಸಮಾಜದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ಮಾಡಲಾಗಿದೆ. ಅಲ್ಲದೆ, ಪರಿಸರದಲ್ಲಿ ನಿರಂತರ ಗೋ ಕಳ್ಳತನ ನಡೆಯುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ, ರಾಜೇಶ್ ಕಡಲೆಕೆರೆ, ಪುರಂದರ ಮತ್ತಿತರರು ಉಪಸ್ಥಿತರಿದ್ದರು.

Kalikamba-Ad

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English