- Mega Media News Kannada - https://kannada.megamedianews.com -

ಲಂಚ ಸ್ವೀಕರಿಸುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳ ಬಂಧನ

UUDA [1]ಉಡುಪಿ : ಲಂಚ ಸ್ವೀಕರಿಸುತ್ತಿದ್ದ ಆರೋಪದಡಿಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರ ಅಧಿಕಾರಿಗಳನ್ನು ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಭೂ ಪರಿವರ್ತನೆಗೆ ಸಂಬಂಧಿಸಿ ಪ್ರಾಧಿಕಾರದ ಅಧಿಕಾರಿಗಳು ಮೂರು ಲಕ್ಷ ರೂ. ಹಣದ ಬೇಡಿಕೆಯನ್ನು ಮುಂದಿಟ್ಟಿದ್ದರು ಎನ್ನಲಾಗಿದೆ.

ಈ ಬಗ್ಗೆ ನೀಡಿದ ದೂರಿನಂತೆ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಆರೋಪಿಗಳಾದ ಪ್ರಭಾರ ನಗರ ಯೋಜನಾ ಸದಸ್ಯ ಗುರುಪ್ರಸಾದ್, ಸಹಾಯಕ ನಗರ ಯೋಜನಾ ಸದಸ್ಯೆ ನಯೀಮ ಸಯೀದ್, ಗುಮಾಸ್ತ ಪ್ರಸಾದ್ ಎಂಬವರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.