ಕುಖ್ಯಾತ ಆರೋಪಿ ಆಕಾಶಭವನ ಶರಣ್  ರೋಹಿದಾಸ್ ಹಾಗೂ ಇತರ ನಾಲ್ವರ ಸೆರೆ

8:55 PM, Friday, January 14th, 2022
Share
1 Star2 Stars3 Stars4 Stars5 Stars
(No Ratings Yet)
Loading...

Akash Bhavanಮಂಗಳೂರು :  ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಅಲಿಯಾಸ್ ರೋಹಿದಾಸ್ ಹಾಗೂ ಆತನ ಇತರ 4 ಸಹಚರರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ದಿ: 08-12-2021 ರಂದು ರಾತ್ರಿ ಸುಮಾರು 11-30 ಗಂಟೆ ಸುಮಾರಿಗೆ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿ ಚಕ್ರ ವಾಹನದಲ್ಲಿ ಚೇಳಾರು ನಂದಿನಿ ಬ್ರೀಡ್ಜ್ ಪರಿಸರದಲ್ಲಿ ಹೋಗುತ್ತಿದ್ದ ಸಮಯ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಫಿರ್ಯಾದಿದಾರರ ಬಳಿಯಿದ್ದ ಮೊಬೈಲ್ ಫೋನ್, ನಗದು ರೂ. 3000/- ಹಾಗೂ ಕೆಎ-19-ಹೆಚ್ ಎ-3016 ನೇ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಈ ಪ್ರಕರಣದಲ್ಲಿ ಭಾಗಿಯಾದ ರೋಹಿದಾಸ್ ಅಲಿಯಾಸ್  ಶರಣ್ ಆಕಾಶಭವನ, ಪ್ರಾಯ(38), ವಾಸ: ಆಕಾಶಭವನ, ಕಾವೂರು, ಮಂಗಳೂರು. ಅನಿಲ್ ಕುಮಾರ್ ಸಾಲ್ಯಾನ್ ಅಲಿಯಾಸ್ ಅಲಿಯಾಸ್  ಅನಿಲ್ ಪಂಪ್ ವೆಲ್, ಪ್ರಾಯ(40), ವಾಸ: ಕಂಕನಾಡಿ, ಮಂಗಳೂರು. ಸೈನಾಲ್ ಡಿ ಸೋಜಾ, ಪ್ರಾಯ(22), ವಾಸ: ಬಜ್ಪೆ, ಮಂಗಳೂರು. ಪ್ರಸಾದ್, ಪ್ರಾಯ(39), ವಾಸ: ಫರಂಗಿಪೇಟೆ, ಬಂಟ್ವಾಳ, ಮಂಗಳೂರು. ಚೇತನ್ ಕೊಟ್ಟಾರಿ, ಪ್ರಾಯ(35), ವಾಸ: ಜೆಪ್ಪಿನಮೊಗರು, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳ ಪೈಕಿ ಆಕಾಶಭವನ ಶರಣ್ ಎಂಬಾತನು ಈ ಪ್ರಕರಣದ ಪ್ರಮುಖ ಸೂತ್ರದಾರಿಯಾಗಿದ್ದು, ಈತನು ಇತ್ತೀಚೆಗೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡವನು ತನ್ನ ಸಹಚರರೊಂದಿಗೆ ಸೇರಿ ಈ ಕೃತ್ಯವನ್ನು ಎಸಗಿರುವುದಾಗಿದೆ. ಈ ಕೃತ್ಯಕ್ಕೆ ಉಪಯೋಗಿಸಿದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಆಕಾಶಭವನ ಶರಣ್ ಅಲಿಯಾಸ್  ರೋಹಿದಾಸ್ ತನ್ನ ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಫಿಸುತ್ತಿದ್ದ ವಿಚಾರಣೆ ವೇಳೆ ತಿಳಿದುಬಂದಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದಾಖಲಾದ ಸುಲಿಗೆ ಪ್ರಕರಣದಲ್ಲಿ ಸುಲಿಗೆ ಮಾಡಿದ ಮೊಬೈಲ್ ಫೋನ್ ನಿಂದ ಆಕಾಶಭವನ ಶರಣ್ ನು ಬೆದರಿಕೆ ಹಾಕಿರುವ ಬಗ್ಗೆ ವಿಚಾರಣೆ ವೇಳೆ ತಿಳಿದುಬಂದಿರುತ್ತದೆ.

ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರುಗಳ ಪತ್ತೆ ಕಾರ್ಯ ಮುಂದುವರಿದಿದೆ.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English