ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆಯಿತು.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು. ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು. ಆಗ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ರಮಾನಾಥ ರೈ ನಡುವೆ ವಾಗ್ವಾದ ನಡೆದು ಅವರನ್ನು ತಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಸಮಾಧಾನ ಪಡಿಸಿದ ಬಳಿಕ ಪ್ರಕರಣ ಸುಖಾಂತ್ಯವಾಯಿತು. ವಾಗ್ವಾದ ನಡೆಸಿದವರನ್ನು ಸಭಾಂಗಣದಿಂದ ಹೊರ ಹೋಗುವಂತೆ ಹಿರಿಯ ನಾಯಕರು ಸೂಚಿಸಿದರು.
Click this button or press Ctrl+G to toggle between Kannada and English