ಮೂಡುಬಿದಿರೆ: ಓಮ್ನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ.
ಗೋಳಿತ್ಯಾರು ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ವಾಮನ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಡಗು ತಿಟ್ಟಿನ ಯಕ್ಷಗಾನ ಮೇಳ (ಹಿರಿಯಡ್ಕ ಮೇಳ)ದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದರಾಗಿದ್ದರು.
ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೈಕ್ನಲ್ಲಿ ಬರುವಾಗ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
Click this button or press Ctrl+G to toggle between Kannada and English