ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದ ಸರಕಾರ

5:26 PM, Friday, January 21st, 2022
Share
1 Star2 Stars3 Stars4 Stars5 Stars
(No Ratings Yet)
Loading...

weekend-curfew ಬೆಂಗಳೂರು  : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಯಲ್ಲಿ  ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿ, ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ಮುಂದುವರಿಸುವುದಾಗಿ ತೀರ್ಮಾನಿಸಲಾಗಿದೆ.

ಮುಖ್ಯಾಂಶಗಳು:

1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ
2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ.
3. ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.
4. ಪಾಸಿಟಿವಿ ದರ ಶೇ. 19.94 ರಷ್ಟಿದೆ.
5. ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ
ದರ ಶೇ. 16.57 ರಷ್ಟಿದೆ.
6. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.
7. ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.
8. ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು
ಕಾರ್ಯಾರಂಭಮಾಡಿವೆ.
9. ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.
10. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.
11. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.
12. ವಾರಾಂತ್ಯ ಕರ್ಫ್ಯೂ ವಿಧಿಸಿದರು ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5 ರಿಂದ 6ರ ಮದ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.
13. ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
14. ಜೊತೆಗೆ ಕೋವಿಡ್ 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಯಿತು.
15. ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
16. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:-
17. ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ
ವರೆಗೆ ಜಾರಿಯಲ್ಲಿರಲಿದೆ.
18. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
19. ಆದ್ದರಿಂದ ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.
20. ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English