ಕಾಸರಗೋಡು : ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸರಕಾರೀ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಘಟನೆ ನಡೆದಿದೆ.
ಜಿಲ್ಲಾ ಮಟ್ಟದ ಧ್ವಜಾರೋಹಣವನ್ನು ಸಚಿವ ಅಹ್ಮದ್ ದೇವರಕೋವ್ ನೆರವೇರಿಸಿದರು. ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಧ್ವಜವನ್ನು ತಲೆಕೆಳಗಾಗಿ ಹಾರಿಸಿರುವುದು ಸಚಿವರಾಗಲೀ ಅಥವಾ ಇತರ ಅಧಿಕಾರಿಗಳಾಗಲೀ ಗಮನ ಕೊಡಲಿಲ್ಲ.
ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಿದ ನಂತರ ಸಚಿವ ಅಹಮದ್ ದೇವರಕೋವಿಲ್ ವಂದಿಸಿದರು. ಇದಾದ ಬಳಿಕ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ ಎಂದು ಮಾಧ್ಯಮಗಳು ಗಮನ ಸೆಳೆದವು. ಆಗ ಸಚಿವರು ಮತ್ತು ಇತರ ಅಧಿಕಾರಿಗಳು ಧ್ವಜವನ್ನು ಮತ್ತೆ ಸರಿಯಾಗಿ ಹಾರಿಸಿದರು.
Click this button or press Ctrl+G to toggle between Kannada and English