ನವದೆಹಲಿ : ಖ್ಯಾತ ಗಾಯಕಿ, ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ್ ನಿಧನಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಕಾಲ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.
ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬೆಳಗ್ಗೆ 8.12ರ ಸುಮಾರಿಗೆ ಲತಾ ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಭಾನುವಾರ ಸಂಜೆ 6.30ಕ್ಕೆ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದೆ.
Click this button or press Ctrl+G to toggle between Kannada and English