ಮಂಗಳೂರು : ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿ ಮಾಡುತ್ತಿರುವುದು ದೇಶಕ್ಕೆ ಅವಮಾನ, ವಿಶ್ವದ ಭೂಪಟದಲ್ಲಿ ಭಾರತವನ್ನು ಗುರುತಿಸುವ ಮೊದಲು ಜನ ಕರ್ನಾಟಕದತ್ತ ನೋಡುತ್ತಿದ್ದರೂ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಅದರಲ್ಲೂ ಕರಾವಳಿ ಶಿಕ್ಷಣ, ವೈದ್ಯಕೀಯ ಕ್ಷೇತ್ರದ ಮೂಲಕದ ಮಹತ್ವದ ಕೊಡುಗೆ ನೀಡಿದ ಪ್ರದೇಶ. ಇಲ್ಲಿ ಎಲ್ಲಾ ಧರ್ಮದ ಜನರು ಪರಸ್ಪರ ಗೌರವದೊಂದಿಗೆ ಅವರವರ ಧಾರ್ಮಿಕ ಆಚಾರ ವಿಚಾರಗಳೊಂದಿಗೆ ಸೌಹಾರ್ದತೆಯೊಂದಿಗೆ ಬದುಕಬೇಕೆನ್ನುವುದು ಕಾಂಗ್ರೆಸ್ ಆಶಯ. ನ್ಯಾಯಾಲಯ ಮೇಲೆ ನಮಗೆ ನಂಬಿಕೆ ಗೌರವ ಇದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ದೇಶ ಈಗ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ. ದೇಶವನ್ನು ಮರುನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ. ಹೀಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಿದ್ದಾರೆ.
ಪಕ್ಷದಲ್ಲಿ ಬ್ಲಾಕ್, ಜಿಲ್ಲಾ ಪದಾಧಿಕಾರಿಗಳ ಚುನಾವಣೆ ನಿಗದಿಯಾಗಿದ್ದು, ಈಗ ಸದಸ್ಯತ್ವ ನೋಂದಣಿ ಮಾಡಿಕೊಂಡರೆ ಮತದಾನದ ಹಕ್ಕು ನೀಡಲಾಗುವುದು. 40 ಬೂತ್ ಗಳಿಗೆ ಒಬ್ಬ ಮುಖ್ಯ ನೋಂದಣಿದಾರರನ್ನು ನೇಮಕ ಮಾಡಿದ್ದೇವೆ. ಮುಂದಿನ ಚುನಾವಣೆ ಸಂದರ್ಭ ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಸದಸ್ಯರ ಅಭಿಪ್ರಾಯ ಕೇಳಲು ಅನುವಾಗಲಿದೆ. ಕಾಂಗ್ರೆಸ್ ಕಾರ್ಯಕರ್ತರ ಭಾವನೆ ಅಧ್ಯಕ್ಷರ ಭಾವನೆಯಾಗಬೇಕು. ಯಾರು ನಮ್ಮ ನಾಯಕರಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನು ಆನ್ಲೈನ್ ಮೂಲಕ ಸಂಗ್ರಹಿಸಲು ಅನುವಾಗುವಂತೆ ಡಿಜಿಟಲ್ ಸದಸ್ಯತ್ವ ನೋಂದಣಿ ಆರಂಭಿಸಿದ್ದೇವೆ.
ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇರುವವರು 5 ರೂ ಕೊಟ್ಟು ಸದಸ್ಯರಾಗಬಹುದು. ಗುರುತಿನ ಚೀಟಿ ಪಡೆಯಲು ಇಚ್ಛಿಸುವವರು ಜಿಲ್ಲಾ ಕಾಂಗ್ರೆಸ್ ನಲ್ಲಿ 10 ರೂ. ನೀಡಿ ಪಡೆಯಬಹುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಂಸದ ಇಬ್ರಾಹಿಂ, ಶಾಸಕ ಮಂಜುನಾಥ ಭಂಡಾರಿ, ಮಾಜಿ ಸ್ಪೀಕರ್ ಬಿ.ಎಲ್.ಶಂಕರ್, ಮಾಜಿ ಸಚಿವ ಬಿ.ರಮಾನಾಥ ರೈ, ಅಭಯ ಚಂದ್ರ ಜೈನ್, ಮಾಜಿ ಶಾಸಕರಾದ ವಸಂತ ಬಂಗೇರ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಜಿ.ಎ.ಬಾವ ಮಿಥುನ್ ರೈ, ಲುಕ್ಮಾನ್ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English