‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಮನವಿ

8:32 PM, Tuesday, February 8th, 2022
Share
1 Star2 Stars3 Stars4 Stars5 Stars
(No Ratings Yet)
Loading...

HJJSಉಜಿರೆ : ‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಉಜಿರೆಯ ಉಪತಹಸೀಲ್ದಾರರಾದ, ಜಯ ಕೆ, ಪೊಲೀಸ್ ಕಾನ್ಸ್ಟೇಬಲ್ ಶ್ರೀ. ಧನಂಜಯ, ಹಾಗೂ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ. ಭುವನೇಶ್ ಇವರಿಗೆ ಮನವಿ ನೀಡಲಾಯಿತು.

ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕ್ರತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶ ದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇಧದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ದೂಮಪಾನ ಮಾಡುವುದು, ಡ್ರಗ್ ಮಾಫಿಯಾ ದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ. ಅಷ್ಟೇಅಲ್ಲದೇ ಈ ದಿನ ಸಮೀಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕ ವಾಗುತ್ತಿರುವುದು, ಅನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ. ಈ ದಿನ ಹುಡುಗಿಯರನ್ನು ಆಕರ್ಷಿಸಲು ವೇಗದಿಂದ ವಾಹನ ಓಡಿಸುವುದು ಮುಂತಾದ ದುರ್ಘಟನೆಗಳ ಪ್ರಮಾಣವು ಹೆಚ್ಚಾಗುತ್ತಿದೆ. ಈ ವ್ಯಾಲೆಂಟೈನ್ ದಿನದ ಕಾರಣ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತವರಣ ಹಾಳಾಗುವುದರ ಜೊತೆಗೆ ಕಾನೂನು ಸುವ್ಯಸ್ಥೆಯ ಪ್ರಶ್ನೆಯು ನಿರ್ಮಾಣವಾಗುವ ಬೋಗವಾಧಿ ವೃತ್ತಿಯು ಹೆಚ್ಚಾಗಿ, ಸರಕಾರದ ಮೇಲೆ ಹೆಚ್ಚುವರಿ ಒತ್ತಡ ನಿರ್ಮಾಣವಾಗುತ್ತದೆ. ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯು ಪ್ರೇಮಿಗಳ ದಿನದ ವಿರುದ್ಧ ಜನಜಾಗೃತಿ ಅಭಿಯಾನ ಮಾಡುವುದು, ಅದನ್ನು ತಡೆಯಲು ಅದಕ್ಕೆ ಪರ್ಯಾಯವಾಗಿ ಫೆಬ್ರವರಿ ೧೪ ರಂದು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಆಯೋಜನೆ ಮಾಡುತ್ತಿವೆ.

ಈ ದೃಷ್ಟಿಯಿಂದ ಸಮಿತಿಯು ಈ ಮುಂದಿನ ಬೇಡಿಕೆ ಇಟ್ಟಿತು.
1. ವ್ಯಾಲೆಂಟೈನ್ ದಿನದಂದು ವಿಶೇಷ ಪೋಲಿಸ್ ದಳ ರಚಿಸಿ ಶಾಲಾ-ಕಾಲೇಜುಗಳಲ್ಲಿ ಅನುಚಿತ ಕೃತ್ಯ ಮಾಡುವವರ ಮೇಲೆ, ವೇಗದಿಂದ ವಾಹನ ಓಡಿಸುವವರ ಮೇಲೆ ಕ್ರಮ ಜರುಗಿಸುವುದು.
2. ಪ್ರೇಮಿಗಳ ದಿನದಂದು ನಡೆಯುವ ತಪ್ಪು ಪ್ರಕಾರಗಳನ್ನು ಗಮನದಲ್ಲಿರಿಸಿ ಪಾರ್ಕ್, ಮುಂತಾದ ಸ್ಥಳಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಯುವುದು.
3. ಇಂತಹ ಅಯೋಗ್ಯ ಆಚರಣೆಗಳಿಗೆ ಪ್ರೋತ್ಸಾಹ ನೀಡದಂತೆ ಶಾಲಾ ಕಾಲೇಜುಗಳಿಗೆ ನಿರ್ದೇಶನವನ್ನು ನೀಡುವುದು.

ವಿಶ್ವ ಹಿಂದೂ ಪರಿಷತ್ ತಾಲೂಕು ಪ್ರಖಂಡ ಕಾರ್ಯದರ್ಶಿಗಳಾದ ಶ್ರೀ. ಮೋಹನ ಬೆಳ್ತಂಗಡಿ, ಶ್ರೀ. ವಿಘ್ನೇಶ ಆಚಾರ್ಯ ವಿಶ್ವ ಹಿಂದೂ ಪರಿಷತ್ ನಗರ ಕಾರ್ಯದರ್ಶಿ ಬೆಳ್ತಂಗಡಿ, ಶ್ರೀ. ಕೇಶವ ಅಂಚಿನಡ್ಕ, ಬೆಳ್ತಂಗಡಿ ವಾರ್ಡ್ ಬಿಜೆಪಿ ಕಾರ್ಯದರ್ಶಿ, ಶ್ರೀ. ವೆಂಕಪ್ಪ ಮೂಲ್ಯ ಇಂದಬೆಟ್ಟು ವೀರಭದ್ರ ದೇವಸ್ಥಾನದ ಅಧ್ಯಕ್ಷರು , ಶ್ರೀ. ಅಭಿಷೇಕ್, ಶ್ರೀರಾಮಸೇನಾ ಜಿಲ್ಲಾ ಸಹ ವಕ್ತಾರ, ಶ್ರೀ. ಅಣ್ಣಿ ಗೌಡ ಇಂದಬೆಟ್ಟು ವೀರಭದ್ರ ದೇವಸ್ಥಾನ ಸಮಿತಿ ನಿರ್ದೇಶಕ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಕರುಣಾಕರ ಅಭ್ಯಂಕರ, ಶ್ರೀ. ರತ್ನಾಕರ ಆಚಾರ್ಯ, ಶ್ರೀ. ಯೋಗೇಶ್ ಕೆಂಬರ್ಜೆ, ಶ್ರೀ. ಎಂ ಹರೀಶ ಇವರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English