- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಖಾಸಗಿ ಬಸ್ ಪಲ್ಟಿ, ಡೀಸೆಲ್‌ ಸೋರಿಕೆ, ಹಲವರಿಗೆ ಗಾಯ

sea bird [1]ಬಂಟ್ವಾಳ : ಮಂಗಳೂರು ಬೆಂಗಳೂರು ಸಂಚಾರದ  ಖಾಸಗಿ ಬಸ್ಸೊಂದು  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ  ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ‌. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.