ಬಂಟ್ವಾಳ : ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುತಕ್ತ ಬುಧವಾರ ನಡೆದ ‘ಕುಟುಂಬ ಸಮಾವೇಶ’ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಕುಟುಂಬ ಪ್ರಭೋದನ್ ಪ್ರಮುಖ್ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿದರು.
ಪ್ರತಿದಿನ ನಾವು ಮನೆಯಲ್ಲಿ ಭಜನೆ ಮತ್ತು ಭೋಜನಕ್ಕೆ ಒಟ್ಟಾಗಿ ಕುಟುಂಬಸ್ಥರು ಸೇರಿಕೊಂಡಾಗ ಅಂತಹ ಮನೆ ದೇವಾಲಯವಾಗಿ ಪರಿವರ್ತನೆಗೊಳ್ಳುತ್ತದೆ. ಅನ್ನಬ್ರಹ್ಮನನ್ನು ನಾವು ಸ್ವೀಕರಿಸುವ ಮೊದಲು ಭಗವಂತನ ಸ್ಮರಿಸಿ ಭಕ್ತಿಯಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು ಎಂದು ಆರ್ ಎಸ್ ಎಸ್ ರಾಷ್ಟ್ರೀಯ ಕುಟುಂಬ ಪ್ರಭೋದನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದ್ದಾರೆ.
ಇಲ್ಲಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ನಡೆದ ಕುಟುಂಬ ಸಮಾವೇಶದಲ್ಲಿ ಅವರು ಉಪನ್ಯಾಸ ನೀಡಿದರು.
ಮಾತೃಭಾಷೆ ಮರೆತು ವಿದೇಶಿ ಉಡುಗೆ -ತೊಡುಗೆ ಸಹಿತ ವಿಕೃತ ಸಂಸ್ಕೃತಿ ಪ್ರತಿಬಿಂಬಿಸುತ್ತಿರುವುದು ಖೇದಕರ ಎಂದರು.
ಆರ್ ಎಸ್ ಎಸ್ ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮತ್ತಿತರರು ಇದ್ದರು.
ತಾ 17 ರಂದು (ಗುರುವಾರ) ಬೆಳಿಗ್ಗೆ ಗಂಟೆ 8.45ಕ್ಕೆ ನಡ್ವಂತಾಡಿ ಉದಯ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ದೇವರ ವಿಗ್ರಹಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಲಿದ್ದು, ಅಳದಂಗಡಿ ಅರಮನೆ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸುವರು. ಈಗಾಗಲೇ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು, ಬ್ರಹ್ಮಕಲಶೋತ್ಸವದ ಯಶಸ್ವಿಗೆ ವಿವಿಧ ಉಪ ಸಮಿತಿ ಸದಸ್ಯರು ಶ್ರಮಿಸುತ್ತಿದ್ದಾರೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English