ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ (47) ಮೃತಪಟ್ಟವರು. ಅವರ ಬಾವ ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ (45) ಪೂಜಾರಿ ಬಂಧಿತ ಆರೋಪಿ.
ಕೇಶವ ಪೂಜಾರಿ ಮಂಗಳೂರಿನಲ್ಲಿ ಕೆಲಸಕ್ಕಿದ್ದು, ಜ.31ರಂದು ಮನೆಗೆ ಬಂದ ಅವರು, ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರೇಮಾ ಈ ವಿಚಾರವನ್ನು ತನ್ನ ಅಣ್ಣ ಅಶೋಕ್ ಪೂಜಾರಿಗೆ ತಿಳಿಸಿದ್ದಾರೆ. ಮನೆಗೆ ಬಂದ ಅವರು ಕೇಶವ ಪೂಜಾರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನು ತಾಯಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಔಷಧ ಪಡೆದು, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಕೇಶವ ಪೂಜಾರಿಗೆ ಫೆ.8ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡಿದ್ದು, ಮನೆ ಮಂದಿ ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ನೆರೆಹೊರೆಯವರು ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದ್ದು, ಅವರು ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿ ಶವಪರೀಕ್ಷೆ ಮಾಡಿಸಲು ಸೂಚಿಸಿದ್ದಾರೆ. ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ತಿಳಿದುಬಂದಿದೆ.
Click this button or press Ctrl+G to toggle between Kannada and English