- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ದಂಧೆ, ನಾಲ್ವರು ಯುವತಿಯರ ರಕ್ಷಣೆ

Nishmitha-Anupama [1]ಮಂಗಳೂರು :  ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದರ  ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಕದ್ರಿ ಪೋಲಿಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ ಪೀಬಿ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದ ತಂಡ ದಾಳಿ ನಡೆಸಿದ್ದರು.

ದಲ್ಲಾಳಿಗಳಾದ ಬಂಟ್ವಾಳ ವಿಟ್ಲಪಡ್ನೂರು ಗ್ರಾಮ ಪರ್ತಿಪಾಡಿಯ ಕೆ.ಪಿ. ಹಮೀದ್ (54), ಆಕಾಶಭವನ ನಂದನಪುರದ ಅನುಪಮಾ ಶೆಟ್ಟಿ(46), ಸುಬ್ರಹ್ಮಣ್ಯ ಕುಲ್ಕುಂದ ನಿವಾಸಿ  ಪ್ರಸ್ತುತ ಎಕ್ಕೂರು ವಾಸುಕಿ ನಗರದಲ್ಲಿ ವಾಸವಿರುವ ನಿಶ್ಮಿತಾ (23) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ 5 ಮೊಬೈಲ್ ಫೋನುಗಳು ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ಆಯುಕ್ತ ಶಶಿಕುಮಾರ್ ಎನ್., ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಗಳಾದ ರಾಜೇಂದ್ರ ಬಿ., ಪ್ರದೀಪ ಟಿ. ಆರ್. ಹಾಗೂ ಸಿಸಿಬಿ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.