ಗ್ರಾಹಕರ ರಕ್ಷಣೆಗೆ ಕಾನೂನು ಮಾಪನಶಾಸ್ತ್ರವೆಂಬ ಅಸ್ತ್ರ: ಕೆ ಜಿ ಕುಲಕರ್ಣಿ

8:38 PM, Thursday, March 3rd, 2022
Share
1 Star2 Stars3 Stars4 Stars5 Stars
(No Ratings Yet)
Loading...

Kulkarniಮಂಗಳೂರು: ಗ್ರಾಹಕರು ತಮಗೇನಾದರೂ ಮೋಸವಾದರೆ ಅವರ ರಕ್ಷಣೆಗೆ ಕಾನೂನು ಮಾಪನಶಾಸ್ತ್ರ ಕಾಯ್ದೆಯಿದೆ. ಈ ಕಾನೂನಿನಡಿ ದೂರು ದಾಖಲಿಸಿ, ಗ್ರಾಹಕರ ವೇದಿಕೆಯಡಿ ಪರಿಹಾರ ಪಡೆಯಬಹುದಾಗಿದೆ, ಎಂದು ದಕ್ಚಿಣ ಕನ್ನಡದ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ ಜಿ ಕುಲಕರ್ಣಿ ಹೇಳಿದರು.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ಸಂಘ ಮತ್ತು ಗ್ರಾಹಕ ವೇದಿಕೆಗಳು ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ, ʼಲೀಗಲ್ ಮೆಟ್ರಾಲಜಿ ಆಂಡ್ ಇಟ್ಸ್ ಅಪ್ಲಿಕೇಶನ್ಸ್ʼ ಎಂಬ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಗ್ರಾಹಕರ ಹಿತರಕ್ಷಣೆಗಾಗಿ ಇರುವ ಈ ಕಾನೂನಿನ ಬಗ್ಗೆ ಅರಿವು ಹೆಚ್ಚಿಸುವ ಅಗತ್ಯವಿದೆ, ಎಂದರು.

ಮುಖ್ಯ ಅತಿಥಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಉದಯ್ ಕುಮಾರ್ ಎಂ. ಎ ಮಾತನಾಡಿ, ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗದಿದ್ದರೆ ಮೋಸಹೋಗುವ ಸಾಧ್ಯತೆಗಳು ಹೆಚ್ಚು, ಎಂದು ಎಚ್ಚರಿಸಿದರು. ಕಾಲೇಜಿನ ವಾಣಿಜ್ಯ ಸಂಘ ಮತ್ತು ಗ್ರಾಹಕ ವೇದಿಕೆಯ ಸಹಾಯಕ ನಿರ್ದೇಶಕ ಡಾ. ಎ. ಸಿದ್ಧಿಕ್ , ವಂಚನೆಯ ವಿರುದ್ಧ ಧ್ವನಿಯೆತ್ತಲು ಕಾನೂನಿನ ನೆರವು ಪಡೆದುಕೊಳ್ಳಬಹುದು, ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ ಕಾರ್ಯಕ್ರಮಕ್ಕೆ ಶುಭಕೋರಿದರು. ಕಾರ್ಯಕ್ರಮದ ಭಾಗವಾಗಿ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾನೂನು ಮಾಪನಶಾಸ್ತ್ರ (ಮಂಗಳೂರು- 2) ನಿರೀಕ್ಷಕ ಜಯರಾಜ್, ಉಪನ್ಯಾಸಕರಾದ ಡಾ. ಸೌಮ್ಯಾ ಪ್ರವೀಣ್, ಪೂಜಾರಿ ಜಯಶ್ರೀ ಮುದ್ದು ಮೊದಲಾದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಯಾ ಅತಿಥಿಗಳನ್ನು ಸ್ವಾಗತಿಸಿದರೆ, ಅಮಿಷಾ ಕಾರ್ಯಕ್ರಮ ನಿರೂಪಿಸಿದರು. ಶರಣ್ ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English