ಮಂಗಳೂರು : ಪೊಲೀಸರ ಕಟ್ಟುನಿಟ್ಟಿನ ಕ್ರಮಗಳ ನಂತರ ಕಡಿಮೆಯಾಗಿದ್ದ ಸೋಷಿಯಲ್ ಮೀಡಿಯಾದಲ್ಲಿ ಗಲಭೆ ಮತ್ತು ಹಿಂಸೆಗೆ ಪ್ರಚೋದನೆ ನೀಡುವ ಪೋಸ್ಟ್ಗಳು ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಮಂಗಳೂರು ಪ್ರಾಂತ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹೊಸ ಅಲೆಯ ಪೋಸ್ಟ್ಗಳು ಮುಖ್ಯವಾಗಿ 2017ರಲ್ಲಿ ನಡೆದ ಎಸ್ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವ ಕುರಿತು ಸಂದೇಶಗಳನ್ನು ಒಳಗೊಂಡಿವೆ. ‘Target 900’, ‘Team Target Boys’, ಮತ್ತು ‘Immu Bai’ ನಂತಹ ಇನ್ನಾ ಗ್ರಾಮ್ ಪೇಜ್ಗಳಲ್ಲಿ “Revange Is Loading” ಮತ್ತು “Target Set One By One” ಎಂಬ ಭಯ ಹುಟ್ಟಿಸುವಂತಹ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ.
ಈ ಪೋಸ್ಟ್ಗಳು ಹಿಂದೂ ಸಂಘಟನೆಯ ಮುಖಂಡ ಹಾಗೂ ಕಲಾಯಿ ಅಶ್ರಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮೇಲ್ಗೆ ಎಚ್ಚರಿಕೆ ನೀಡುವ ಉದ್ದೇಶ ಹೊಂದಿವೆ. ಪೋಸ್ಟ್ಗಳಲ್ಲಿ ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು, ಮುಖ ಮರೆಮಾಚಿರುವ ವ್ಯಕ್ತಿಗಳಿರುವ ಪ್ರಚೋದನಕಾರಿ ರೀಲ್ಸ್ಗಳನ್ನು ಸಹ ಹಂಚಿಕೊಳ್ಳಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಥಾಲ್ ಸಾವಿಗೂ ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆಯನ್ನು ಇದೇ ರೀತಿಯಲ್ಲಿ ನೀಡಲಾಗಿದೆ. ಭರತ್ ಕುಮೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದಾನೆ.
ಈ ಪ್ರಚೋದನಕಾರಿ ಚಟುವಟಿಕೆಗಳ ಬಗ್ಗೆ ತಕ್ಷಣವೇ ಗಮನಹರಿಸಿರುವ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಪೊಲೀಸರು ಈ ಬಗ್ಗೆ ಸುಮೋಟೊ ಕೇಸ್ ದಾಖಲಿಸಿಕೊಂಡಿದ್ದು, ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ 16 ಇನ್ನಾ ಗ್ರಾಮ್ ಖಾತೆಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ತಡೆಯಲು, ಪೊಲೀಸರು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಟ್ಟಿದ್ದು, ನಟೋರಿಯಸ್ ಗ್ಯಾಂಗ್ಗಳ ಚಲನವಲನಗಳನ್ನು ಸಹ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಈ ಹಿಂದೆಯೂ ಸಾಮಾಜಿಕ ಜಾಲತಾಣಗಳಾದ BEARY_ROYAL_NAWAB, ಬ್ಯಾರಿ ಟ್ರೋಲರ್, ಮತ್ತು ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್ಗಳ ಮೂಲಕ ಭರತ್ ಕುಮೇಲ್ಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಸಂದೇಶಗಳಲ್ಲಿ “ಭರತ್ ಕುಮೇಲ್ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ,” ಮತ್ತು “ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ” ಎಂದು ಉಲ್ಲೇಖಿಸಲಾಗಿತ್ತು. ಇದು ಕೇವಲ ಪ್ರತ್ಯೇಕ ಘಟನೆಯಲ್ಲ, ಬದಲಾಗಿ ಸಂಘಟಿತ ಪ್ರಯತ್ನ ಎಂದು ತಿಳಿದುಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









