ಬೆಳ್ತಂಗಡಿ : ತುಳುನಾಡಿನ ಜೀವನಾಡಿಗೆ ಮಾರಕವಾದ ಅವೈಜ್ಙಾನಿಕ ಎತ್ತಿನಹೊಳೆ ಯೋಜನೆಗೆ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ 3000 ಕೋಟಿ ರೂಪಾಯಿ ಮೀಸಲಿರಿಸಿದ್ದು ಖಂಡನೀಯ. ಈ ಮೂಲಕ ತುಳುನಾಡನ್ನು ಬರಡು ಭೂಮಿಯಾಗಿಸುವ ವ್ಯವಸ್ಥಿತ ಷಡ್ಯಂತ್ರವನ್ನು ಮುಂದುವರಿಸಿದ್ದು ತುಳುವರಿಗೆ ಎಚ್ಚರಿಕೆ ಗಂಟೆಯಾಗಿದೆ. ತುಳುವರ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ನುಸುಳಿ ನಾಟಕವಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಶಾಸಕ/ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಬದ್ಧತೆಯನ್ನು ನಾಡಿನ ಜನಕ್ಕೆ ತೋರಿಸಬೇಕು. ನಿರಂತರವಾಗಿ ತುಳುನಾಡಿನ ನೆಲ, ಜಲ, ಭಾಷೆಯ ಮೇಲೆ ಪ್ರಹಾರ ನಡೆಸುತ್ತಿರುವ ಕರ್ನಾಟಕ ರಾಜ್ಯವು ನಾಡಿನ ಅಸ್ಮಿತೆಯನ್ನು ಅಳಿಸುವ ಪ್ರಯತ್ನದಲ್ಲಿ ನಿರತವಾಗಿದೆ. ರಾಷ್ಟ್ರೀಯ ಪಕ್ಷಗಳ ಈ ರೀತಿಯ ನಾಡ ವಿರೋಧಿ ಧೋರಣೆಗೆ ತುಳುವರು ತಕ್ಕ ಪ್ರತ್ಯುತ್ತರವನ್ನು ಮುಂದಿನ ದಿನಗಳಲ್ಲಿ ನೀಡಲಿದ್ದಾರೆ ಎಂದು ತುಳುವೆರೆ ಪಕ್ಷದ ಅಧ್ಯಕ್ಷರಾದ ಶೈಲೇಶ್ ಆರ್.ಜೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English