ಭಾರತದಲ್ಲಿ ಮಹಿಳೆಗೆ ದೇವತೆಯ ಸ್ಥಾನ: ನಳಿನ್ ಕುಮಾರ್ ಕಟೀಲ್

9:19 PM, Tuesday, March 8th, 2022
Share
1 Star2 Stars3 Stars4 Stars5 Stars
(No Ratings Yet)
Loading...

Women's Dayಮಂಗಳೂರು : ಮಹಿಳೆಗೆ ದೇವತೆಯ ಸ್ಥಾನ ನೀಡಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ, ಹೆಣ್ಣನ್ನು ಮಾತೃ ಸ್ವರೂಪಿಯಾಗಿ ಕಾಣುವ ಈ ದೇಶದಲ್ಲಿ ಅವಳಿಗೆ ಸ್ವಾತಂತ್ರ್ಯದೊಂದಿಗೆ ಸಮಾನತೆಗೂ ಹೆಚ್ಚಿನ ಗೌರವವನ್ನು ನೀಡಲಾಗಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟರು.

ಅವರು ಮಾ.8ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಸಬಲೀಕರಣಕ್ಕೆ ದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ, ಆ ಮೂಲಕ ಉತ್ತಮ ಸಮಾಜ ಹಾಗೂ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಲಾಗಿದೆ, ಸ್ವಾತಂತ್ರ್ಯ ಪೂರ್ವದಲ್ಲಿ ಈ ದೇಶದಲ್ಲಿ ಹಕ್ಕಿಗಾಗಿ ಹೋರಾಟ ಮಾಡಲಿಲ್ಲ, ಬದಲಿಗೆ ರಾಷ್ಟ್ರ ಗೌರವವನ್ನು ಕಾಪಾಡಲು ಶಸ್ತ್ರ ಹಿಡಿದ ಮಹಿಳೆಯರಿದ್ದಾರೆ, ಝಾನ್ಸಿ ರಾಣಿ ಲಕ್ಷ್ಮೀಭಾಯಿ ಒಂದು ರೀತಿಯಲ್ಲಿ ದೇಶ ಸೇವೆ ಮಾಡಿದರೆ, ಅಕ್ಕ ಮಹಾದೇವಿಯಂತಹ ಸಂತರು ಮತ್ತೊಂದು ರೀತಿಯಲ್ಲಿ ಸೇವೆ ಮಾಡಿ ಈ ರಾಷ್ಟ್ರದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

ದೇಶದಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲಾಗಿದೆ, ನಗರ ಸ್ಥಳೀಯ ಸಂಸ್ಥೆಗಳಾದ ನಗರ ಹಾಗೂ ಪಟ್ಟಣ ಪಂಚಾಯಿತಿಗಳ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ, ಆ ಆಶಯವೂ ಪ್ರಧಾನಮಂತ್ರಿಯವರದ್ಧಾಗಿತ್ತು, ಮಹಿಳೆಯರ ಆರೋಗ್ಯ ದೃಷ್ಟಿಯಿಂದ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಿರುವ ಪ್ರಧಾನಮಂತ್ರಿಗಳು, ಭೇಟಿ ಬಚಾವೋ ಭೇಟಿ ಪಡಾವೋದಂತಹ ಕಡಿಮೆಯಾಗುತ್ತಿರುವ ಮಕ್ಕಳ ಲಿಂಗಾನುಪಾತ ಮತ್ತು ದೀರ್ಘಾವಧಿಯ ಆಧಾರದ ಮೇಲೆ ಮಹಿಳಾ ಸಬಲೀಕರಣದ ಸಮಸ್ಯೆ ಪರಿಹರಿಸುವ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಧಾನಮಂತ್ರಿಯವರು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆಸ್ಥೆ ವಹಿಸಿದ್ದಾರೆ, ರಾಜ್ಯದ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಹೆಣ್ಣು ಮಗುವಿನ ಉತ್ತೇಜನ ಹಾಗೂ ರಕ್ಷಣೆಗಾಗಿ ಭಾಗ್ಯಲಕ್ಷ್ಮೀ ಯೋಜನೆಗಳನ್ನು ಜಾರಿಗೆ ತಂದಿದ್ದರು, ಮಹಿಳಾ ಉದ್ಯಮಿಗಳಿಗೆ ಉದ್ಯಮಶೀಲತೆ, ಸ್ಟಾರ್ಟ್ ಅಪ್‍ನಂತಹ ಯೋಜನೆಗಳ ಜಾರಿ, ಬಡ ಮಹಿಳೆಯರಿಗಾಗಿ ಜಾರಿಗೊಳಿಸಲಾದ ಉಜ್ವಲ್ ನಂತಹ ಯೋಜನೆಗಳಿಂದಾಗಿ ಮಹಿಳೆಯರಿಗೆ ಅಪಾರ ನೆರವು ದೊರೆತಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಶಾಲಾ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಸುವಂತಹ ವಿನೂತನ ಯೋಜನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.

ಸ್ತ್ರೀಶಕ್ತಿ ಒಕ್ಕೂಟಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ಸರ್ಕಾರದಿಂದ ಹಲವು ಯೋಜನೆಗಳು ರೂಪಿತವಾಗಿದ್ದು ಅವುಗಳನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ಸ್ತ್ರೀ ಶಕ್ತಿ ಸಂಘಗಳು ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸದೃಢ ಮಾಡುತ್ತಿವೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಮಹಿಳೆಯರು ಗೂಡುದೀಪಗಳಲ್ಲ, ಲೋಕ ಬೆಳಗುವ ದೀಪಗಳು ಎಂಬ ಕವಿವಾಣಿಯಂತೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅವರ ಸಾಮಥ್ರ್ಯ ಗೋಚರಿಸುತ್ತಿದೆ, ಇಡೀ ಕುಟುಂಬದ ಆಧಾರಸ್ತಂಭವಾಗಿರುವ ಮಹಿಳೆಗೆ ದೊರಕಬೇಕಾದ ಸೌಲಭ್ಯಗಳು ಪರಿಪೂರ್ಣವಾಗಿ ದೊರೆಯುತ್ತಿರುವ ಬಗ್ಗೆ ತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ಸಂಘರ್ಷಗಳನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮಹಿಳೆ ಇಡೀ ಕುಟುಂಬದೊಂದಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ, ಆದಕಾರಣ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಆನ್‍ಲೈನ್ ಮೂಲಕ ಆರೋಗ್ಯ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಘಟಕ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯ ಮಹಿಳೆಯರಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ, ಜಿಲ್ಲೆಯಲ್ಲಿ 237 ಹೆಚ್ಚಿನ ಘಟಕಗಳು ಆರಂಭಗೊಂಡಿದ್ದು, ಅವುಗಳಲ್ಲಿ ಶೇ.90ರಷ್ಟು ಮಹಿಳೆಯರಿಗೆ ನೀಡಲಾಗಿದೆ, ಮಹಿಳೆಯ ಆರೋಗ್ಯ ದೃಷ್ಟಿಯಿಂದ ಮಧ್ಯಪ್ರದೇಶದಲ್ಲಿ ಜಾರಿಗೆ ತಂದಿರುವಂತೆ ಮುಟ್ಟಿನ ಕಪ್‍ಗಳ ವಿತರಣೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು, ಜಿಲ್ಲೆಯ ಹಲವು ಗ್ರಾಮ ಪಂಚಾಯತ್‍ಗಳಲ್ಲಿ ಸ್ತ್ರೀಶಕ್ತಿ ಗುಂಪುಗಳು ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ಮಾಡುತ್ತಿದ್ದಾರೆ, 28 ಜನ ಮಹಿಳಾ ಮಹಿಳೆಯರು ವಾಹನ ಚಾಲನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಕೋವಿಡ್ ಸೋಂಕಿನ ವೇಳೆ ಮನೆಯೊಂದಿಗೆ ಇಡೀ ಸಮಾಜದ ರಕ್ಷಣೆ ಮಾಡಿದ್ದು, ಮಹಿಳೆ. ವೈದ್ಯರಿಂದ ಹಿಡಿದು ಸಹಾಯಕಿಯ ತನಕ ಎಲ್ಲಾ ರೂಪದಲ್ಲೂ ಸೋಂಕಿತರ ಆರೈಕೆಯಲ್ಲಿ ಅವಳು ತೊಡಗಿದ್ದಳು, ನಗರಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗೌರಿ ಹಾಗೂ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ವೇದಿಕೆಯಲ್ಲಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಬೋವಿ ಸ್ವಾಗತಿಸಿದರು. ಪ್ರಿಯಾ ನಿರೂಪಿಸಿದರು.

ಕಾರ್ಯಕ್ರಮದಲ್ಲಿ 2021ನೇ ಸಾಲಿನಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಯರಿಗೆ, ಅತ್ಯುತ್ತಮ ಸ್ತ್ರೀಶಕ್ತಿ ಗುಂಪು ಪ್ರಶಸ್ತಿ ಹಾಗೂ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಕೀಲರಾದ ಶ್ರೀಮತಿ ಗೌರಿ ಅವರು ಮಹಿಳೆ ಮತ್ತು ಕಾನೂನಿಗ ಬಗ್ಗೆ ಮಾಹಿತಿ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English