ಕರಾವಳಿ ಕಾಲೇಜಿನ ಲೆಕ್ಚರರ್ ಅವಹೇಳನಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

9:32 PM, Wednesday, March 16th, 2022
Share
1 Star2 Stars3 Stars4 Stars5 Stars
(4 rating, 1 votes)
Loading...

Bharathಮಂಗಳೂರು : ನಗರದ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಇದರ  ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ ಭರತ್ (20) ಎಂಬಾತ ಅದೇ ಕಾಲೇಜಿನ ಲೆಕ್ಚರರ್ ಅವಹೇಳನಕ್ಕೆ ಬೇಸತ್ತು ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ನಗರದ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್  ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ ಪಿ.ಜಿ.ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾರೆ. ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ. ‘ಕಾಲೇಜಿನ ರಾಹುಲ್ ಎಂಬ ಪ್ರಾಧ್ಯಾಪಕ ತಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡದೆ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡರು. ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದುದರಿಂದ ಈ ಲೋಕವನ್ನು ತ್ಯಜಿಸುತ್ತಿದ್ದೇನೆ’ ಎಂದು ವಿದ್ಯಾರ್ಥಿ ಭರತ್ ತಾಯಿಗೆ  ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಬೆಂಗಳೂರಿನಿಂದ ಬುಧವಾರ ಮಂಗಳೂರಿಗೆ ಆಗಮಿಸಿರುವ ತಂದೆ, ತಾಯಿ ಮಗನ ಸಾವಿಗೆ ಕಾರಣರಾಗಿರು ವವರ ವಿರುದ್ಧ ಸೂಕ್ತ ತನಿಖೆ ನಡೆಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಉರ್ವ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English