ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ, ವ್ಯಕ್ತಿಯ ಬಂಧನ

8:39 PM, Saturday, March 19th, 2022
Share
1 Star2 Stars3 Stars4 Stars5 Stars
(No Ratings Yet)
Loading...

Wajidಮಂಗಳೂರು : ಸುಳ್ಯದಿಂದ ಸರಕಾರಿ ಬಸ್ ನಲ್ಲಿ  ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ವಾಜಿದ್ ಎ. ಜಮಖಾನಿ ಬಂಧಿತ ಆರೋಪಿ.

ಮಹಿಳೆ ಸುಳ್ಯದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಳು.

ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English