ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸ್ ಕಾವಲು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರು

4:38 PM, Monday, March 28th, 2022
Share
1 Star2 Stars3 Stars4 Stars5 Stars
(No Ratings Yet)
Loading...

sslc Examಮಂಗಳೂರು : ವಿವಾದದ ಕೇಂದ್ರವಾಗಿರುವ ಹಿಜಾಬ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇಂದ್ರಗಳ ಆವರಣದವರೆಗೂ ಹಿಜಾಬ್ ಧರಿಸಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರು ಬಳಿಕ ಹಿಜಾಬ್ ತೆಗೆದಿರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಇದೇ ವೇಳೆ ಖಾಸಗಿ ಶಾಲೆಗಳ, ಸಮವಸ್ತ್ರ ಜತೆಗೆ ಹಿಜಾಬ್ ಭಾಗವಾಗಿರುವ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯಸ್ಥರ ಅನುಮತಿ ಮೇರೆಗೆ ಹಿಜಾಬ್ ನೊಂದಿಗೆ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭಆರಂಭ ಗೊಂಡಿದ್ದು ,ಇಂದು ಪ್ರಥಮ ಭಾಷಾ ಪರೀಕ್ಷೆ  ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕಿತ್ತು ಅದರಲ್ಲಿ ಒಟ್ಟು 350 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಒಟ್ಟು 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಪ್ರಥಮ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯ ಸಾಮಾನ್ಯ ಕೇಂದ್ರಗಳಲ್ಲಿ ಒಟ್ಟು 217 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರೆ. ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ 133 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಡಿಡಿಪಿಐ ಸುಧಾಕರ್ ಕೆ. ತಿಳಿಸಿದ್ದಾರೆ.

ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಪರೀಕ್ಷೆ ಬರೆಯಲು ಸೂಚನೆ ನೀಡಲಾಗಿದ್ದು, ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರದಲ್ಲಿ ಪರೀಕ್ಷೆ ಬರೆಯಲು ಸೂಚನೆ, ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾವಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English